ಹಳೇ ಬಸ್ ನಿಲ್ದಾಣ ತೆರವು ಕಾರ್ಯ ನಿಲ್ಲಿಸಲು ಶಾಸಕ ಪ್ರಕಾಶ್ ಆಗ್ರಹ
ಕನ್ನಡಪ್ರಭ ವಾರ್ತೆ ಹಾಸನ ಏ. 3
ಹಳೇ ಬಸ್ ನಿಲ್ದಾಣ ತೆರವು ಕಾರ್ಯ ನಿಲ್ಲಿಸಿ, ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಿರುವ ನಕ್ಷೆಯನ್ನು ರಾಜ್ಯ ಸಾರಿಗೆ ಸಂಸ್ಥೆ ಸಾರ್ವಜನಿಕರ ಮುಂದಿಟ್ಟು ನಂತರ ಕಾಮಗಾರಿ ಮುಂದುವರಿಸಬೇಕು. ಇಲ್ಲದಿದ್ದರೆ ಕೋರ್ಟ್ ಮೊರೆ ಹೋಗುವುದಾಗಿ ಶಾಸಕ ಎಚ್.ಎಸ್.ಪ್ರಕಾಶ್ ಹೇಳಿದರು.
ನಗರದ ಹಳೇ ಬಸ್ ನಿಲ್ದಾಣಕ್ಕೆ ಬುಧವಾರ ಭೇಟಿ ನೀಡಿದ್ದ ಶಾಸಕರು, ಕಟ್ಟಡ ತೆರವು ಕಾರ್ಯವನ್ನು ನಿಲ್ಲಿಸುವಂತೆ ಸೂಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಜಾಗ ನಗರಸಭೆ ಆಸ್ತಿಯಾಗಿದ್ದು, ಇದನ್ನು ಹೆಚ್ಚಿನದಾಗಿ ಬಸ್ ನಿಲ್ದಾಣಕ್ಕೇನೆ ಬಳಸಿಕೊಳ್ಳಬೇಕು. ಅದನ್ನು ಬಿಟ್ಟು ವಾಣಿಜ್ಯ ಉದ್ದೇಶಕ್ಕೆ ಹೆಚ್ಚಿನದಾಗಿ ಮೀಸಲಿಡುವುದು ಸರಿಯಲ್ಲ. ಆದ್ದರಿಂದ ಈ ಬಗ್ಗೆ ಸಾರಿಗೆ ಸಂಸ್ಥೆ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದರು.
ಸಾರ್ವಜನಿಕರಿಗೆ ಬದಲಿ ವ್ಯವಸ್ಥೆಯನ್ನು ಕಲ್ಪಿಸದೆ ಏಕಾಏಕಿ ಇಲ್ಲಿನ ಕಟ್ಟಡಗಳ ಹಾಗೂ ಇದ್ದಂತಹ ನೆರಳಿನ ಶೆಲ್ಟರ್ಗಳನ್ನು ತೆರವುಗೊಳಿಸಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ರಾತ್ರಿ ವೇಳೆ ವಿದ್ಯುತ್ ವ್ಯವಸ್ಥೆ ಇಲ್ಲದೆ ಪರಿತಪಿಸುವಂತಾಗಿದೆ. ಸಾರ್ವಜನಿಕರಿಗೆ ಅನುಕೂಲತೆ ಕಲ್ಪಿಸಿ ನಂತರ ತೆರವುಗೊಳಿಸಬೇಕು. ಅಷ್ಟೇ ಅಲ್ಲದೆ ಈ ಜಾಗದಲ್ಲಿ ಬಸ್ ನಿಲ್ದಾಣಕ್ಕೆ ಎಷ್ಟು ಜಾಗ ಹಾಗೂ ವಾಣಿಜ್ಯ ಹಾಗೂ ಪಾರ್ಕಿಂಗ್ ಉದ್ದೇಶಕ್ಕೆ ಎಷ್ಟು ಜಾಗ ಮೀಸಲಿಡಲಾಗಿದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಿ ನಂತರ ಕಾಮಗಾರಿ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ ಇತರರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

