ವಲಸೆ ತಡೆಗೆ ಕೈಗಾರಿಕೆ ಸ್ಥಾಪಿಸಲು ಹೋರಾಟ
ಕ.ಪ್ರ. ವಾರ್ತೆ ಅರಸೀಕೆರೆ ಏ. 4
ಕ್ಷೇತ್ರದಲ್ಲಿ ದಶಕಗಳಿಂದ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆಗಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿರುವ ಜನರಿಗೆ ಉದ್ಯೋಗ ನೀಡಲು ಇಲ್ಲಿ ಯಾವುದೇ ರೀತಿಯ ಕೈಗಾರಿಕೆಗಳು ಸ್ಥಾಪನೆ ಇಲ್ಲದಿರುವುದೇ ದೊಡ್ಡ ಸಮಸ್ಯೆಯಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.
ಪ್ರಯುಕ್ತ ಈ ಭಾಗದಲ್ಲಿ ಕೈಗಾರಿಕೆಗಳನ್ನು ಇಲ್ಲಿಗೆ ತರಲು ತಾವು ಪ್ರಾಮಾಣಿಕ ಹೋರಾಟ ನಡೆಸಿದ್ದೇನೆ ಎಂದು ಪಟ್ಟಣದ ಹೊರವಲಯದ ಮೈಸೂರು ರಸ್ತೆಯಲ್ಲಿನ ತೋಟವೊಂದರಲ್ಲಿ ಗುರುವಾರ ನಡೆದ ತಾಲೂಕು ಕಸಬಾ ಹೋಬಳಿ ಕಾರ್ಯಕರ್ತರ ಸಭೆಯಲ್ಲಿ ಹೇಳಿದರು.
ಕುಡಿಯುವ ನೀರಿನ ಯೋಜನೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲು ತಾವು ಅವಿರತ ಶ್ರಮ ವಹಿಸಿದ್ದೇನೆ ಎಂದರು.
ಇಲ್ಲಿನ ಕೆರೆಕಟ್ಟೆಗಳ ಅಭಿವೃದ್ಧಿಗೆ ಹಾಗೂ ಮಳೆಯ ನೀರನ್ನು ಅಲ್ಲಲ್ಲಿ ಸಂಗ್ರಹ ಮಾಡುವ ಯೋಜನೆ ರೂಪಿಸದ ಕಾರಣ ಪ್ರಸ್ತುತ ತಾಲೂಕಿನ ಎಲ್ಲೆಡೆಗಳಲ್ಲಿ ಅಂರ್ತಜಲ ಮಟ್ಟ ಕುಸಿದಿದೆ. 500 ಅಡಿ ಆಳ ಕೊರೆದರೂ ಕೊಳವೆ ಬಾವಿಗಳಲ್ಲಿ ನೀರು ಇಲ್ಲ. ಕೆಲವು ಕೊಳವೆಬಾವಿಗಳ ನೀರಿನಲ್ಲಿ ಪ್ಲೊರೈಡ್ ಅಂಶ ಇದ್ದು, ಇದರಿಂದ ಆನೇಕ ರೋಗರುಜಿನಗಳು ಜನರು ನರಳುತ್ತಿದ್ದಾರೆ. ಈ ಬಗ್ಗೆ ತಾವು ಶಾಸನಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ರಾಜ್ಯ ಸರ್ಕಾರದ ಗಮನ ಸೆಳೆದ ಪರಿಣಾಮ ತಾಲೂಕಿನ 477 ಗ್ರಾಮಗಳಿಗೆ 150 ಕೋಟಿ ರು. ಯೋಜನೆ ಹಾಗೂ ಪ್ರತ್ಯೇಕವಾಗಿ ಪಟ್ಟಣ ಎಲ್ಲಾ ವಾರ್ಡ್ಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು 121 ಕೋಟಿ ರು.ಗಳ ಯೋಜನೆ ಮತ್ತು ಯಗಚಿ ನದಿ ಮೂಲದಿಂದ ತಾಲೂಕಿನ ಬಾಣಾವರ, ಕಣಕಟ್ಟೆ ಹೋಬಳಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಎರಡು ಹಂತಗಳ ಯೋಜನೆ ರೂಪಿಸಿ ಅವುಗಳನ್ನು ಕಾರ್ಯರೂಪಕ್ಕೆ ತರಲಾಗಿದೆ.
ಈ ಐದು ವರ್ಷದ ಅವಧಿಯಲ್ಲಿ ಕೇತ್ರದ ಸಮಗ್ರ ಅಭಿವೃದ್ಧಿಗೆ ಸುಮಾರು ಸಾವಿರ ಕೋಟಿ ರು.ಗಳಿಗೆ ಹೆಚ್ಚಿನ ಕೆಲಸ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕ್ಷೇತ್ರದಲ್ಲಿ ಜೆಡಿಎಸ್ಗೆ ಭದ್ರ ನೆಲೆ ಕಲ್ಪಿಸಲು ಕಾರ್ಯಕರ್ತರು ಸಂಕಲ್ಪ ಮಾಡಬೇಕೆಂದು ಕರೆ ನೀಡಿದರು. ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ಮಾಜಿ ಉಪಾಧ್ಯಕ್ಷ ಲಚ್ಚಾನಾಯಕ್, ಹುಚ್ಚೇಗೌಡ, ಎನ್.ಎಸ್.ಸಿದ್ದರಾಮಶೆಟ್ಟಿ, ಜಿ.ಟಿ.ಗಣೇಶ್, ಎಚ್.ಟಿ.ಶಿವಮೂರ್ತಿ ಹಾಗೂ ಇತರರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹೆಗ್ಗಟ್ಟ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು ಮತ್ತು ಬಿಜೆಪಿ ಮುಖಂಡ ಅಗ್ಗುಂದ ಮಹೇಶ್ವರಯ್ಯ ಸೇರಿದಂತೆ ಅನೇಕರು ಶಾಸಕರ ಸಮ್ಮುಖದಲ್ಲಿ ಜೆಡಿಎಸ್ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

