ಹಾಸನ

ಪರೀಕ್ಷೆ ವೇಳೆಯಲ್ಲಿ ನಿರಂತರ ವಿದ್ಯುತ್ ನಿಲುಗಡೆ: ದಂಡೋರ ಸಮಿತಿ ಅಧ್ಯಕ್ಷ ಖಂಡನೆ

Published On :

ಕ.ಪ್ರ. ವಾರ್ತೆ೤ ಅರಸೀಕೆರೆ೤ ಏ.4
ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಗಲು-ರಾತ್ರಿಯೆನ್ನದೆ ವಿದ್ಯುತ್ ಹಾಗೆ ಬಂದು ಹೀಗೆ ಹೋಗುತ್ತಿದ್ದು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಕಗ್ಗತ್ತಲಿನಲ್ಲಿ ವಿದ್ಯಾಭ್ಯಾಸ ಮಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಅಗ್ಗುಂದ ಚಂದ್ರಯ್ಯ ಖಂಡಿಸಿದ್ದಾರೆ.
  ಕಳೆದ 1 ತಿಂಗಳಿನಿಂದ ನಿರಂತರವಾಗಿ ವಿದ್ಯುತ್ ನಿಲುಗಡೆಯಾಗುತ್ತಿದ್ದು, ಈಗ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿವೆ. ಇಂತಹ ಸಂದರ್ಭದಲ್ಲಿಯೂ ಪ್ರತಿದಿನ ಸಂಜೆ ಹಾಗೂ ಬೆಳಗಿನ ಜಾವ ವಿದ್ಯುತ್ ವ್ಯತ್ಯಯವಾಗುತ್ತಿರುವುದು ಗ್ರಾಮೀಣ ವಿದ್ಯಾರ್ಥಿಗಳ ಪಾಲಿಗೆ ಬರಸಿಡಿಲು ಎರಗಿದಂತಾಗಿದೆ. ಇಲಾಖೆ ಸೂಕ್ತ ವ್ಯವಸ್ಥೆ ಮಾಡದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಪುರಸಭೆ  ನಿರ್ಲಕ್ಷ್ಯ:  ಪುರಸಭೆಯ ನಿರ್ಲಕ್ಷ್ಯದಿಂದಾಗಿ ಬೀದಿದೀಪಗಳು ಹಗಲು ರಾತ್ರಿಯೆನ್ನದೆ ಉರಿಯುತ್ತಿರುವುದು ಪಟ್ಟಣದ  ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ದೂರವಾಣಿ ಮೂಲಕ ಪತ್ರಿಕೆಯೊಂದಿಗೆ  ಮಾತನಾಡಿದ ಮಮತಶೆಟ್ಟಿ ಸುಭಾಷ್‌ನಗರ, ಅಂಚೆಕೊಪ್ಪಲು, ಮಲ್ಲೇಶ್ವರ, ಮಾರುಕಟ್ಟೆಯ ರಸ್ತೆಗಳಲ್ಲಿ  ಬೀದಿದೀಪಗಳು ಹಗಲು ರಾತ್ರಿ ಉರಿಯುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.