ಹಾಸನ

ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ

Published On :

ಆಲೂರು: ತಾಲೂಕು ಆಸ್ಪತ್ರೆಯಲ್ಲಿ 34 ಮಹಿಳೆಯರಿಗೆ ಉದರದರ್ಶಕ ಸಂತಾನ ಶಕ್ತಿಹರಣ  ಶಸ್ತ್ರಚಿಕಿತ್ಸೆ ನಡೆಸಲಾಯಿತು. ಪ್ರತಿ ತಿಂಗಳ ಮೊದಲ ಮಂಗಳವಾರ ಮಹಿಳೆಯರಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಉಮಾದೇವಿ ತಿಳಿಸಿದರು. ಶಿಬಿರದಲ್ಲಿ ಒಂದು ಮಗುವಿರುವ 4, ಎರಡು ಮಕ್ಕಳಿರುವ 24 ಮತ್ತು ಮೂರು, ನಾಲ್ಕು ಮಕ್ಕಳಿರುವ 6 ಮಹಿಳೆಯರಿಗೆ  ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ನಾಗರಾಜ್ ಶಸ್ತ್ರಚಿಕಿತ್ಸೆ ನೆರವೇರಿಸಿದರು. ಜನಸಂಖ್ಯೆಗೆ ಅನುಗುಣವಾಗಿ ಒಂದು ಸಾವಿರಕ್ಕೆ ಒಬ್ಬರು ಆಶಾ ಕಾರ್ಯಕರ್ತರಿದ್ದಾರೆ. ಇವರು ತಮ್ಮ ವ್ಯಾಪ್ತಿಗೊಳಪಡುವ ಮಹಿಳೆಯರನ್ನು ಸಂಪರ್ಕಿಸಿ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆಗೆ ಪ್ರೇರೇಪಿಸಿ ಚಿಕಿತ್ಸೆಗೆ ನೆರವಾಗುತ್ತಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.