ಹಾಸನ

ಆಶಾ ಕಾರ್ಯಕರ್ತೆಯಿಂದ ಮದ್ಯ ಮಾರಾಟ - ಗ್ರಾಮಸ್ಥರ ದೂರು

Published On :

ಕ.ಪ್ರ. ವಾರ್ತೆ೤ ಸಕಲೇಶಪುರ೤ ಏ.6
ತಾಲೂಕಿನ ಕೌಕುಡಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ರಾಜಾರೋಷವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಸ್ತ್ರೀಶಕ್ತಿ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮದಲ್ಲಿ ಈಗಾಗಲೇ ಮದ್ಯ ಮಾರಾಟ ಮಾಡಬಾರದು ಎಂದು ಹಲವು ಬಾರಿ ಪ್ರತಿಭಟನೆ ಮಾಡಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಗ್ರಾಮದಲ್ಲಿ ಮತ್ತೆ ಮತ್ತೆ ರಾಜಾರೋಷವಾಗಿ ಈ ಕಾರ್ಯಕರ್ತೆ ಮದ್ಯ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಗ್ರಾಮಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ಮದ್ಯ ಮಾರಾಟ ಮಾಡಬಾರದು ಎಂದು ಆದೇಶಿಸಿ ಕೆಲವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದರೂ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಗ್ರಾಮಸ್ಥರು ಪ್ರಶ್ನಿಸಿದರೆ ಧಮಕಿ ಹಾಕಿ ಹೆದರಿಸುತ್ತಾಳೆ ಎಂದು ಗ್ರಾಮಸ್ಥರು ಮತ್ತು ಸ್ತ್ರೀಶಕ್ತಿ ಸಂಘದ ಸದಸ್ಯರು ದೂರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈಕೆಯ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಮದ್ಯ ಮಾರಾಟ ನಿಷೇಧಿಸಿ ಗ್ರಾಮದ ಶಾಂತಿ ನೆಮ್ಮದಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.