ಹಾಸನ

ಚಿನ್ನೇನಹಳ್ಳಿಯವರ ಅಂತ್ರ ಕಾದಂಬರಿ ಬಿಡುಗಡೆ ಇಂದು

Published On :

ಬೇಲೂರು: ಯುವ ಲೇಖಕರ ಬಳಗ ಹಾಗೂ ಮನೆ ಮನೆ ಕವಿಗೋಷ್ಠಿ ಆಶ್ರಯದಲ್ಲಿ ಚಿನ್ನೇನಹಳ್ಳಿ ಸ್ವಾಮಿಯವರ ಅಂತ್ರ ಕಾದಂಬರಿ ಬಿಡುಗಡೆ ಸಮಾರಂಭ ಏ.7 ರಂದು ಬೆಳಗ್ಗೆ 10.20 ಕ್ಕೆ  ತಾಲೂಕಿನ ಚಿನ್ನೇನಹಳ್ಳಿಯಲ್ಲಿ ನಡೆಯಲಿದೆ. ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸುವರು. ಬೆಂಗಳೂರಿನ ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ ಪುಸ್ತಕ ಬಿಡುಗಡೆ ಮಾಡುವರು. ಕೃತಿ ಕುರಿತು ಪ್ರೊ. ಸೀ.ಚ.ಯತೀಶ್ವರ ಮಾತನಾಡುವರು. ಹಿರಿಯ ಪತ್ರಕರ್ತ ಸತ್ಯಮೂರ್ತಿ ಆನಂದೂರು ಅಧ್ಯಕ್ಷತೆ ವಹಿಸುವರು. ನಂತರ ನಡೆಯುವ ರಾಜ್ಯಮಟ್ಟದ ಕವಿಗೋಷ್ಠಿಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಚ್.ಎಲ್. ಜನಾರ್ದನ ಉದ್ಘಾಟಿಸುವರು. ನಲ್ನುಡಿ ಸಂಪಾದಕ ದ ದಿನೇಶಕುಮಾರ ಅಧ್ಯಕ್ಷತೆ ವಹಿಸುವರು. ಡಾ. ಹಂಪನಹಳ್ಳಿ ತಿಮ್ಮೇಗೌಡ, ಡಾ.ಎ.ಎಂ ನಾಗೇಶ್, ಟಿ.ಡಿ. ತಮ್ಮಣ್ಣಗೌಡ ಭಾಗವಹಿಸುವರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.