ಹಾಸನ

ಮತದಾರರಿಗೆ ಪ್ರತಿಜ್ಞಾವಿಧಿ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಏ.6
ಪ್ರತಿಯೊಬ್ಬ ನಾಗರಿಕರು ಹಕ್ಕು ಮತ್ತು ಕರ್ತವ್ಯ ಪಾಲಿಸುವಲ್ಲಿ ಮುಂದಾಗಬೇಕು. ಪ್ರಜೆಗಳೇ ಪ್ರಭುಗಳಾದ್ದರಿಂದ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೂಂಡು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಮತದಾರರು ಮುಂದೆ ಬರಬೇಕೆಂದು ಹಿರಿಯ ಪತ್ರಕರ್ತ ಆರ್.ಪಿ.ವೆಂಕಟೇಶ ಮೂರ್ತಿ  ತಿಳಿಸಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಹಾಗೂ ಅನನ್ಯ ಟ್ರಸ್ಟ್ ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ  ನಗರದ ಆಲ್ ಆಮೀನ್ ವಿದ್ಯಾಸಂಸ್ಥೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಮತದಾರರ ಜಾಗೃತಿ ಕುರಿತ ವಿಚಾರ ಸಂಕಿರಣದಲ್ಲಿ  ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗಾಗಿ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಹಕ್ಕನ್ನು ಮತದಾರರು ಬೆಳಸಿಕೂಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಚುನಾವಣಾ ಮಾಧ್ಯಮ ದಢೀಕರಣ ಸಮಿತಿ ಸದಸ್ಯ  ರಾಮೇಗೌಡ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೀತಾ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಸಾಬೀರ್ ಅಹಮದ್, ಕೆ.ಟಿ.ಜಯಶ್ರೀ,  ಅಸ್ಗರ್ ಸಯ್ಯದ್, ಮಾಜೀದ್, ಸಯ್ಯದ್ ತಾಜ್, ಅಮ್ಜದ್ಖಾನ್, ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.