ಹಾಸನ

ಮತದಾರರಲ್ಲಿ ಜಾಗೃತಿಗಾಗಿ ಬೀದಿ ನಾಟಕ

Published On :

ಕನ್ನಡಪ್ರಭ ವಾರ್ತೆ೤ ಹೊಳೆನರಸೀಪುರ೤ ಏ.6
ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ಇದನ್ನು ಕಳೆದುಕೊಳ್ಳದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬೀದಿ ನಾಟಕ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪ್ರದರ್ಶಿಸಲಾಯಿತು. ಹಾಸನದ ಬಿ.ಟಿ. ಮಾನವ ತಂಡದ ಹನ್ನೆರಡು ಸದಸ್ಯರ ತಂಡದಿಂದ ನಾಟಕ ನಡೆಯಿತು. ಬೀದಿ ನಾಟಕಕ್ಕೆ ತಹಸೀಲ್ದಾರ್ ಕೆ.ಪಿ.ಈಶ್ವರಪ್ಪ ತಮಟೆ ಬಡಿಯುವುದರ ಮೂಲಕ ಚಾಲನೆ ನೀಡಿದರು.
ಇತ್ತೀಚಿನ ವರ್ಷಗಳಲ್ಲಿ ಮತದಾನ ಶೇಕಡಾವಾರು ಕಡಿಮೆ ಆಗುತ್ತಿದೆ. ಜತೆಗೆ ವಿದ್ಯಾವಂತ ಮತದಾರರು ಮತದಾನದಲ್ಲಿ ತೊಡಗಿಸಿಕೊಳ್ಳುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರಲ್ಲಿ ಮತದಾನದ ಮಹತ್ವ ತಿಳಿಸುವ ಸಲುವಾಗಿ ಕೇಂದ್ರ ಚುನಾವಣಾ ಆಯೋಗ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಲ್ಲಿ ಮತದಾನದ ಮಹತ್ವ ತಿಳಿಸುವ ಉದ್ದೇಶ ಹೊಂದಿದೆ. ಸಾರ್ವಜನಿಕರು ಮತದಾನದಲ್ಲಿ ಪಾಲ್ಗೊಂಡು ಸುಭದ್ರ ಭಾರತ ನಿರ್ಮಾಣದಲ್ಲಿ ಭಾಗಿಯಾಗುವಂತೆ ತಹಸೀಲ್ದಾರ್ ಮನವಿ ಮಾಡಿದರು.
ಈ ನಾಟಕಗಳನ್ನು ತಾಲೂಕಿನ ಹಳೇಕೋಟೆ, ಹಳ್ಳಿಮೈಸೂರು ಮತ್ತು ಪಟ್ಟಣದ ಪುರಸಭೆ ಹಾಗೂ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.