ಮಾಲೇಕಲ್ ತಿರುಪತಿ ಬೆಟ್ಟದ ಪುಷ್ಕರಣಿ ಬರಿದು
ಕ.ಪ್ರ.ವಾರ್ತೆ ಹಾರನಹಳ್ಳಿ ಏ.7
ತಾಲೂಕಿನ ಇತಿಹಾಸ ಪ್ರಸಿದ್ಧ ಮಾಲೇಕಲ್ ತಿರುಪತಿ ಬೆಟ್ಟದ ತಪ್ಪಲಿನಲ್ಲಿರುವ ಪುಷ್ಕರಣಿ ಸಂಪೂರ್ಣ ಬರಿದಾಗಿದ್ದು, ಯಾತ್ರಾರ್ಥಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ.
ವೆಂಕಟರಮಣ ಸ್ವಾಮಿ ಸನ್ನಿಧಿಯಲ್ಲಿರುವ ಈ ಪುಷ್ಕರಣಿ ದಶಕಗಳಿಂದಲೂ ಬರಿದಾದ ಉದಾಹರಣೆಯೇ ಇರಲಿಲ್ಲ. ಆದರೆ ಈ ಬಾರಿ ಸಂಪೂರ್ಣ ಖಾಲಿಯಾಗಿದ್ದು, ಇತ್ತೀಚೆಗಷ್ಟೇ ಚಂದ್ರಶೇಖರ ಭಾರತಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಪುಷ್ಕರಣಿ ಸ್ವಚ್ಛಗೊಳಿಸಿದ್ದರು.
ವಾಲ್ಮೀಕಿ ಸಮಾಜದ ಮುಖಂಡ ಬಸವರಾಜ್ ಅವರು, ದಶಕಗಳ ಇತಿಹಾಸ ಹೊಂದಿರುವ ಪುಷ್ಕರಣಿ ಬರಿದಾದ ಸನ್ನಿವೇಶವನ್ನು ತಾವು ಬಾಲ್ಯದಿಂದಲೂ ನೋಡಿರಲಿಲ್ಲ. ಆದರೆ ಈ ಬಾರಿ ಒಂದು ಹನಿ ನೀರಿಲ್ಲದಂತಾಗಿರುವುದು ಮುಂದೆ ಆಪತ್ತು ಕಾದಿದೆ ಎನ್ನುವ ಸಂದೇಶ ಸಾರುವಂತಿದೆ. ಪರಮಾತ್ಮನ ಸನ್ನಿಧಿಯಲ್ಲಿಯೇ ಇಂಥ ಪರಿಸ್ಥಿತಿ ನಿರ್ಮಾಣಗೊಂಡರೆ ಜನಸಾಮಾನ್ಯರ ಸ್ಥಿತಿ ಏನಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದರು.
ಪುಷ್ಕರಣಿಯಲ್ಲಿ ನೀರು ಇಲ್ಲದ್ದರಿಂದ ಪ್ರವಾಸಿಗರು, ಯಾತ್ರಾರ್ಥಿಗಳು ಪರದಾಡುವಂತಾಗಿದೆ. ಸಂಬಂಧಿಸಿದವರು ಈಗಲಾದರೂ ಖಾಸಗಿ ಕೊಳವೆ ಬಾವಿಗಳಿಂದ ಪುಷ್ಕರಣಿ ತುಂಬಿಸುವ ಪ್ರಯತ್ನ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

