ಹಾಸನ

ಇಂದು ಸಂವಾದ ಕಾರ್ಯಕ್ರಮ

Published On :

ಹಾಸನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಹಾಸನಾಂಬ ವೈದ್ಯಕೀಯ ಮಹಾವಿದ್ಯಾಲಯ, ಸರ್ಕಾರಿ ಕಾನೂನು ಕಾಲೇಜು, ಎಂ.ಕೃಷ್ಣ ಕಾನೂನು ಕಾಲೇಜು ಹಾಗೂ ಅಲ್ಪಸಂಖ್ಯಾತರ ಸಂಘಗಳ ಸಂಯುಕ್ತಾಶ್ರಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಕಾನೂನು ಅರಿವು ಮತ್ತು ಸಂವಾದ ಕಾರ್ಯಕ್ರಮ  ಏ.9ರಂದು ಬೆಳಿಗ್ಗೆ 9.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಸೋಮಶೇಖರ್ ಉದ್ಘಾಟಿಸುವರು. ಸ್ಥಾಯಿ ವಿವೇಕಾನಂದ ಯುತ್ಮೂವ್ಮೆಂಟ್ಯೋಜನಾ ನಿರ್ದೇಶಕ ಸುಧೀರ್ ಬೆಂಗಳೂರು  ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎಸ್.ಎ.ಮುಸ್ತಾಫ ಹುಸೇನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ಇತರರು ಭಾಗವಹಿಸಲಿದ್ದಾರೆ.
ಭಗೀರಥ ಉಪ್ಪಾರ ಸಂಘಕ್ಕೆ ನೇಮಕ
ಅರಕಲಗೂಡು: ತಾಲೂಕು ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಗೌರವ ಅಧ್ಯಕ್ಷರಾಗಿ ಕೆ.ಎನ್.ಸ್ವಾಮಿಗೌಡ, ಅಧ್ಯಕ್ಷಎಚ್.ಜಿ.ಮಂಜಪ್ಪ, ಕಾರ್ಯದರ್ಶಿ,ಎ.ಪಿ.ಗೋಪಾಲ್, ಖಜಾಂಚಿ, ಕೃಷ್ಣೇಗೌಡ, ಉಪಾಧ್ಯಕ್ಷ,ಕೆ.ಟಿ.ನಾಗರಾಜ್ ಆಯ್ಕೆಯಾಗಿದ್ದಾರೆ.
ಅಕ್ರಮ ಮದ್ಯ ಮಾರಾಟ ವಶ
ಬೇಲೂರು: ತಾಲೂಕಿನ ತಂಡೆಕೆರೆ ಗ್ರಾಮದಲ್ಲಿ ಭಾನುವಾರ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ತಾಲೂಕಿನ ಮಾದಿಹಳ್ಳಿ ಹೋಬಳಿ, ತಂಡೆಕೆರೆ ಗ್ರಾಮದ ಮೂರ್ತಿ ಎಂಬುವರು ಮನೆ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ 1880 ರು.ಬೆಲೆಯ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ನಾಪತ್ತೆ
ಸಕಲೇಶಪುರ: ತಾಲೂಕಿನ ಬೈಕೆರೆ ಗ್ರಾಮದ ಮಂಜುನಾಥ ಎಂಬುವರ ಪತ್ನಿ ಯಶೋಧ (30) ಕಾಫಿ ತೋಟದ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಕನ್ನಡ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ನೈಟಿ ಧರಿಸಿದ್ದರು ಎಂದು ಪತಿ ಮಂಜುನಾಥ ತಿಳಿಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.