ಜನ ಸೇವೆಗಾಗಿ ಕೆಜೆಪಿಯಿಂದ ಸ್ಪರ್ಧೆ: ಕೆ.ಎಂ. ಪುಟ್ಟಸ್ವಾಮಿ
ಕನ್ನಡಪ್ರಭ ವಾರ್ತೆ ಹಾಸನ ಏ. 8
ಹಣ ಮಾಡಲು ಕೆಜೆಪಿ ಸೇರಿ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ. ಬದಲಿಗೆ ಕೈಲಾದಷ್ಟು ಸಮಾಜ ಸೇವೆ ಮಾಡಲು ಸ್ಪರ್ಧಿಸುತ್ತಿದ್ದೇನೆ. ಕಾಂಗ್ರೆಸ್ನಲ್ಲಿ ಸಾಮಾಜಿಕ ನ್ಯಾಯ ಎಂಬುದು ಕನಸಿನ ಮಾತೇ ಸೈ.
ಇದು ಇದೀಗ ತಾನೇ ಕಾಂಗ್ರೆಸ್ ತೊರೆದು ಕೆಜೆಪಿ ಸೇರಿರುವ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ಕೆ.ಎಂ. ಪುಟ್ಟಸ್ವಾಮಿ ಹೇಳಿಕೆ..
ನಾಲ್ಕೂವರೆ ವರ್ಷಗಳಿಂದ ಕ್ಷೇತ್ರದ ಕಡೆ ತಿರುಗಿ ನೋಡದ ಶಾಸಕ ಎ.ಮಂಜು ಚುನಾವಣೆ ಹತ್ತಿರ ಬರುತ್ತಿದ್ದಂತೆ ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಫಾಪನೆ ನೆರವೇರಿಸುತ್ತಿದ್ದಾರೆ. ಈ ಕಳಕಳಿ ಹಿಂದೆ ಏಕೆ ಇರಲಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಈಗಾಗಲೇ 380 ಹಳ್ಳಿಗಳಲ್ಲಿ ಸುತ್ತಿ ಜನಾಭಿಪ್ರಾಯ ಸಂಗ್ರಹಿಸಿದ್ದೇನೆ. ಯಾವುದೇ ಹಳ್ಳಿಯಲ್ಲೂ ಶಾಸಕರ ಬಗ್ಗೆ ಜನರು ಉತ್ತಮ ಅಭಿಪ್ರಾಯ ವ್ಯಕ್ತವಾಗಲಿಲ್ಲ ಎಂದು ಟೀಕಿಸಿದರು.
ನಾನು ಕಾಂಗ್ರೆಸ್ ಸೇರುವುದಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಅಡ್ಡಿ ಪಡಿಸುವ ಮೂಲಕ ಸಿದ್ದರಾಮಯ್ಯಗೆ ಅವಮಾನ ಮಾಡಿದ ಶಾಸಕ ಮಂಜು, ತಮಗೆ ಟಿಕೆಟ್ ತಪ್ಪಿಪ್ಪಿಸುವ ಪ್ರಯತ್ನದಲ್ಲಿ ಯಶಸ್ಸಿಯಾಗಿದ್ದಾರೆ. ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಹಿಂದುಳಿದ ವರ್ಗಗಳ ಮತಗಳು ಇವೆ. ಆದರೂ 7 ಕ್ಷೇತ್ರಗಳಲ್ಲಿ ಒಂದು ಕಡೆಯೂ ಕುರುಬ ಸಮಾಜದ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಸಾಮಾಜಿಕ ನ್ಯಾಯ ಎಂಬುದು ಕಾಂಗ್ರೆಸ್ನಲ್ಲಿ ಕನಸಷ್ಟೇ. ಕ್ಷೇತ್ರಾದ್ಯಂತ ಸುತ್ತಿ ಜನರ ಅಭಿಪ್ರಾಯ ಕೇಳಿದೆ. ಜನತೆ ಕೆಜೆಪಿ ಸೇರುವುದು ಸೂಕ್ತ ಎಂದು ಸಲಹೆ ಮಾಡಿದರು. ಈ ಹಿನ್ನೆಲೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಸಮರ್ಥಿಸಿ ಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

