ಹಾಸನ

ಸಕಲೇಶಪುರದಲ್ಲೂ ಕಾಂಗ್ರೆಸ್ ಪ್ರತಿಭಟನೆ

Published On :

ಸಕಲೇಶಪುರ: ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಡಿ.ಸಿ ಸಣ್ಣಸ್ವಾಮಿಗೆ ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಕಾಂಗ್ರೆಸ್ ಮುಖಂಡರು ಎಚ್ಚರಿಸಿದ್ದಾರೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು, ಕ್ಷೇತ್ರದಲ್ಲಿ ಕಾಂಗ್ರೆಸ್ನ್ನು ನಿರ್ನಾಮ  
ಮಾಡುವ ಉದ್ದೇಶದಿಂದಲೇ ಈ ಕ್ಷೇತ್ರದ ಬಗ್ಗೆ ಅರಿವಿಲ್ಲದ ಡಿ.ಮಲ್ಲೇಶ್ ಅವರಿಗೆ ಟಿಕೆಟ್ ನೀಡಿದ್ದಾರೆ.
 ಕ್ಷೇತ್ರದಲ್ಲಿ ಪಕ್ಷದ ಬೆಳವಣಿಗೆಗೆ ಕೊಡುಗೆ ನೀಡಿರುವ ವ್ಯಕ್ತಿಯನ್ನು ಪರಿಗಣಿಸಿ ಟಿಕೆಟ್ ನೀಡುವುದನ್ನು ಬಿಟ್ಟು ಕಾರ್ಯಕರ್ತರಿಗೆ ಗೊತ್ತಿಲ್ಲದ ವ್ಯಕ್ತಿಯನ್ನು ಅಭ್ಯರ್ಥಿಯಾಗಿಸಿರುವುದು ಬೇಸರದ ಸಂಗತಿ ಎಂದರು.
ಮೋಟಮ್ಮನವರಿಗೆ ಟಿಕೆಟ್ ನೀಡಿದರೆ ಎಲ್ಲಾ ಮುಖಂಡರು ಒಟ್ಟಾಗಿ ಕಾರ್ಯನಿರ್ವಹಿಸಲಿದ್ದೇವೆ. ಒಂದು ವೇಳೆ ಮೋಟಮ್ಮ ಸ್ಪರ್ಧಿಸಲು ನಿರಾಕರಿಸಿದರೆ ಡಿ.ಸಿ ಸಣ್ಣಸ್ವಾಮಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯ ನಂತರ ಕೆಲ ಸಮಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾರ್ಯದರ್ಶಿ ಮಸ್ತಾರೆ ಲೋಕೇಶ್, ಹಾನ್ಬಾಳ್ ಭಾಸ್ಕರ್, ತುಳಸಿಪ್ರಸಾದ್, ತಾಪಂ ಸದಸ್ಯ ಕೊಮರಯ್ಯ, ಪುರಸಭೆ ಸದಸ್ಯ ಸಯ್ಯದ್, ಸುನಿತಾ, ಮನ್ಸೂರ್, ಸುಂದ್ರಮ್ಮ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.