ಗ್ರಾಪಂ ಬಳಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಅರಸೀಕೆರೆ ಏ.8
ತಾಲೂಕಿನ ಅಗ್ಗುಂದ ಗ್ರಾಪಂ ವ್ಯಾಪ್ತಿಯ ಸಿದ್ದರಹಳ್ಳಿ ತಾಂಡ್ಯಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಅನುದಾನದ ಹಣದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ತಾಂಡ್ಯ ಗ್ರಾಮಸ್ಥರು ಗ್ರಾಮಪಂಚಾಯಿತಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ತಾಲೂಕಿನ ಕಸಬಾ ಹೋಬಳಿ ಅಗ್ಗುಂದ ಗ್ರಾಪಂ ಕಚೇರಿ ಮುಂದೆ ಸಿದ್ದರಹಳ್ಳಿ ಲಂಬಾಣಿ ತಾಂಡ್ಯದ ಯುವಕರು ಮತ್ತು ಮಹಿಳೆಯರು ಗುಂಪು ಸೇರಿ ಗ್ರಾಪಂ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಸದಸ್ಯರ ವಿರುಧ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಯುವ ಮುಂದಾಳು ಕೋಟ್ರೇಶ್ ಮಾತನಾಡಿ, ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಅಭಿವೃದ್ಧಿಗೆ ನೀಡುವ ಶೇ 22.75 ಮೀಸಲು ಹಣವನ್ನು ಕಳೆದ ನಾಲ್ಕೈದು ವರ್ಷಗಳಿಂದ ನಾವುಗಳು ವಾಸಿಸುತ್ತಿರುವ ಸುಮಾರು 45 ಮನೆಗಳಿರುವ ಲಂಬಾಣಿ ತಾಂಡ್ಯದ ಅಭಿವೃದ್ಧಿಗೆ ಬಳಕೆ ಮಾಡದ ಕಾರಣ ಮೂಲಭೂತ ಸೌಲಭ್ಯಗಳಿಂದ ಇಲ್ಲಿನ ಜನರು ವಂಚಿತರಾಗಿದ್ದಾರೆ.
ಬೀದಿ ದೀಪಗಳ ವ್ಯವಸ್ಥೆಯಿಲ್ಲದೆ ರಾತ್ರಿ ಕತ್ತಲೆಯಲ್ಲಿ ಕಾಲ ಕಳೆಯುತ್ತಿರುವ ಇಲ್ಲಿನ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದೆ ಬಯಲು ಪ್ರದೇಶ ಎಲ್ಲರೂ ಅವಲಂಬಿಸಿದ್ದಾರೆ ಎಂದು ಹೇಳಿದರು.
ಶಿವಕುಮಾರ ನಾಯ್ಕ್ ಮಾತನಾಡಿ ಆಶ್ರಯ ಯೋಜನೆಯಲ್ಲಿ ಮನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ತಾರತಮ್ಯ ನೀತಿಯನ್ನು ಮಾಡುವ ಮೂಲಕ ಲಂಬಾಣಿ ತಾಂಡ್ಯ ಮತ್ತು ವಡ್ಡರಹಟ್ಟಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ದೂರಿದರು. ಪ್ರತಿಭಟನೆಯಲ್ಲಿ ಹೇಮ್ಲಾ ನಾಯ್ಕ್, ರೇಖಾಬಾಯಿ, ಲಕ್ಷ್ಮೀಬಾಯಿ, ರತ್ನಬಾಯಿ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

