ರಾಜ್ಯಕ್ಕೆ ಪ್ರಬಲ ಪ್ರಾದೇಶಿಕ ಪಕ್ಷ ಅವಶ್ಯ: ವಿಶ್ವನಾಥ್
ಕ.ಪ್ರ. ವಾರ್ತೆ ಬೇಲೂರು ಏ.9
ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗಳನ್ನು ನಿವಾರಣೆ ಮಾಡಲು ಪ್ರಬಲವಾದ ಪ್ರಾದೇಶಿಕ ಪಕ್ಷ ಅಗತ್ಯವಾಗಿದ್ದು, ಯಡಿಯೂರಪ್ಪ ನೇತೃತ್ವದ ಕೆಜೆಪಿ ಪ್ರಬಲವಾಗಿ ಬೆಳೆಯುವುದಲ್ಲದೆ ಪಕ್ಷಕ್ಕೆ ಒಕ್ಕಲಿಗರು, ಮುಸ್ಲಿಮರು ದಲಿತರು, ಹಿಂದುಳಿದ ವರ್ಗದವರು ಹಾಗೂ ಎಲ್ಲಾ ವರ್ಗದ ಜನರು ಸಹಕಾರ ನೀಡಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಬೇಲೂರು ಕ್ಷೇತ್ರದ ಕೆಜೆಪಿ ಅಭ್ಯರ್ಧಿ ಎಚ್.ಎಂ.ವಿಶ್ವನಾಥ್ ಹೇಳಿದರು.
ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ಬಿಎಸ್ಪಿ ಪಕ್ಷದ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಬಲ ಪ್ರಾದೇಶಿಕ ಪಕ್ಷ ಅವಶ್ಯಕತೆ ಇದ್ದು, ಯಡಿಯೂರಪ್ಪ ನೇತೃತ್ವದ ಕೆಜೆಪಿ ಜಾತ್ಯತೀತ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜಾತ್ಯತೀತ ತತ್ವ ಆಧರಿಸಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳನ್ನು ತೊರೆದು ಮುಖಂಡರು ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪಕ್ಷ ಸೇರುತ್ತಿರುವುದು ರಾಜ್ಯದಲ್ಲಿ ಹೊಸ ಶಕೆ ಆರಂಭಗೊಂಡಂತಿದೆ ಎಂದರು.
ತಮಿಳುನಾಡಿನಲ್ಲಿರುವ ಪ್ರಾದೇಶಿಕ ಪಕ್ಷ ತನ್ನದೇ ಆದ ಆಡಳಿತದಿಂದ ಕೇಂದ್ರ ಸರ್ಕಾರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ತನ್ನ ನೀರಿನ ದಾಹವನ್ನು ಇಂಗಿಸಿ ಕೊಳ್ಳುತ್ತಿದೆ ಎಂದರು. ಯಗಚಿ ಜಲಾಶಯವಿದ್ದರೂ ಬಯಲು ಪ್ರದೇಶವಾದ ಹಳೇಬೀಡು ಮಾದೀಹಳ್ಳಿ ಜಾವಗಲ್ ಬಾಣಾವಾರ ಪ್ರದೇಶಗಳಿಗೆ ನೀರಿಲ್ಲದೆ ಜನ ಕಂಗಾಲಾಗಿದ್ದರೂ ಇದುವರೆಗೆ ಆಡಳಿತ ನಡೆಸಿರುವ ಜೆಡಿಎಸ್ ಕಾಂಗ್ರೆಸ್ ಪಕ್ಷ ಜನಗಳ ಭಾವನೆಗೆ ಸ್ವಂದಿಸದೇ ಇರುವುದು ವಿಷಾದನೀಯ ಎಂದರು.
ಕೆಜೆಪಿ ಮುಖಂಡರಾದ ಚಿಕ್ಕಬ್ಯಾಡಿಗೆರೆ ಮಂಜುನಾಥ್, ಮೊಗಣ್ಣಗೌಡ, ಧರ್ಮಣ್ಣ, ಕಡಿದಾಳ್ ಮಂಜಣ್ಣ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

