'ಪುರಸಭೆ ಎಂಜಿನಿಯರ್ ನಿರ್ಲಕ್ಷ್ಯ: ಪಟ್ಟಣದಲ್ಲಿ ಕುಡಿಯೋಕ್ಕೂ ನೀರಿಲ್ಲ'
ಕ.ಪ್ರ. ವಾರ್ತೆ, ಸಕಲೇಶಪುರ, ಏ.10
ಪುರಸಭೆಯ ಎಂಜಿನಿಯರ್ ಪ್ರಭಾದೇವಿ ನಿರ್ಲಕ್ಷ್ಯದಿಂದ ಪಟ್ಟಣದ ಜನತೆಗೆ ಕುಡಿಯುವ ನೀರಿಗೂ ಹಾಹಾಕಾರ ಬಂದಿದೆ ಎಂದು ಪುರಸಭೆಯ ಕಾಂಗ್ರೆಸ್ ಸದಸ್ಯರು ಅರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪುರಸಭೆ ಸದಸ್ಯ ಸಯ್ಯದ್ ಮುಫಿಜ್, ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ 8 ಕೋಟಿಗೂ ಹೆಚ್ಚು ಹಣ ವೆಚ್ಚವಾಗಿದ್ದರೂ ಒಂದು ತಿಂಗಳಿಂದ ಕುಡಿಯುವ ನೀರನ್ನು ನೀಡಲಾಗುತ್ತಿಲ್ಲ ಎಂದರೆ ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಇದಕ್ಕೆ ಈ ಹಿಂದೆ ಆಡಳಿತ ನಡೆಸಿರುವ ಜೆಡಿಎಸ್ ಪಕ್ಷ ಪ್ರಮುಖ ಕಾರಣವಾಗಿದೆ. ಜತೆಗೆ ಅಧಿಕಾರಿಗಳು ಸಹ ಹೊಣೆಯಾಗಿದ್ದಾರೆ ಮುಖ್ಯವಾಗಿ ಪುರಸಭೆಯ ಎಂಜಿನಿಯರ್ ಪ್ರಭಾದೇವಿ ಎಂದು ಟೀಕಿಸಿದರು.
ಹೇಮಾವತಿ ನದಿಯನ್ನು ತಡೆದು ಚೆಕ್ ಡ್ಯಾಂ ನಿರ್ಮಿಸಲಾಗಿದೆ. ನದಿಯಲ್ಲಿ ನೀರಿನ ಸಮಸ್ಯೆ ಇಲ್ಲದಿದ್ದರೂ, ಇಲ್ಲಸಲ್ಲದ ತಾಂತ್ರಿಕ ಕಾರಣಗಳನ್ನು ನೀಡಲಾಗುತ್ತಿದೆ ಎಂದರು.
ನೀರು ವಿತರಿಸುವ ಯಂತ್ರಗಳು ಕೆಟ್ಟುಹೋಗಿವೆ ಎಂದು ಸಬೂಬು ಹೇಳುತ್ತಾರೆ. ನಮಗೆ ಅಗತ್ಯವಾಗಿರುವ ನೀರನ್ನು ನೀಡಲಾಗದ ಅಧಿಕಾರಿಗಳು ಇಲ್ಲಿ ಏಕಿರಬೇಕು? ಇಲ್ಲಿಂದ ತೊಲಗಲಿ ಎಂದು ಹೇಳಿದರು.
ನೀರಿನ ಸಮಸ್ಯೆ ವಿರೋಧಿಸಿ ಸದ್ಯದಲ್ಲೇ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಪುರಸಭೆಯ ಕಾಂಗ್ರೆಸ್ ಸದಸ್ಯರಾದ ಸುಮಿತ್ರ, ಕಾಳಿಂಗಪ್ಪ, ಪದ್ಮ, ಶೋಭ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

