ಹಾಸನ

ಚಾಲಕ ನಿರ್ಲಕ್ಷ್ಯ - ಬಸ್‌ನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

Published On :

ಕನ್ನಡಪ್ರಭ ವಾರ್ತೆ  ಅರಸೀಕೆರೆ  ಏ.10
ಬಸ್ ಚಾಲಕನ ನಿರ್ಲಕ್ಷ್ಯತೆಯಿಂದ ಬಸ್ಸಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ  ಚಾಚಾಗಂಡಸಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಚನ್ನರಾಯಪಟ್ಟಣ ತಾ. ಬಾಗೂರು ಹೋಬಳಿ, ದಸರಿಹಳ್ಳಿ ವಾಸಿ ಯೋಗೀಶ್ (32) ಮೃತಬಟ್ಟ ದುರ್ದೈವಿ.
  ಅವರು ಗಂಡಸಿ ಹ್ಯಾಂಡ್ ಪೋಸ್ಟ್‌ನಿಂದ ಹೊನ್ನಮಾರನಹಳ್ಳಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಅರಸೀಕೆರೆ-ಚನ್ನರಾಯಪಟ್ಟಣ ರಸ್ತೆ ಹತ್ತಿರ ಹೋಗುತ್ತಿದ್ದರು. ಈ ಸಂದರ್ಭದಲ್ಲಿ  ಬಸ್ ಚಾಲಕ ತನ್ನ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದ ಪರಿಣಾಮ ಬಸ್ಸಿನಿಂದ ಕೆಳಕ್ಕೆ ಬಿದ್ದ ಯೋಗೇಶ್ ತೀವ್ರ ಗಾಯಗೊಂಡರು.
 ಕೂಡಲೇ ಅವರನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯೋಗೀಶ್ ಮೃತಪಟ್ಟಿದ್ದಾರೆ. ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ನಗರದ ಹೊಸಲೈನ್ ರಸ್ತೆ, ಬಸವೇಶ್ವರ ಬಡಾವಣೆಯ ತನ್ವೀರ್ ಅಹಮದ್ ನಗರದ ಹೊಸ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ 22 ಸಾವಿರ ರು. ಮೌಲ್ಯದ ಹಿರೋಹೊಂಡಾ ಮೋಟಾರ್ ಬೈಕನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ. ಈ ಬಗ್ಗೆ ಅವರು ಬಡಾವಣೆ  ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಬೈಕಿನಲ್ಲಿ ಆಕಸ್ಮಿಕ ಬೆಂಕಿ
ವಿದ್ಯಾರ್ಥಿಯೊಬ್ಬ ಬೈಕ್ ಚಲಾಯಿಸಲು ಮುಂದಾದ ಸಮಯದಲ್ಲಿ ಆಕಸ್ಮಿಕವಾಗಿ ಬೈಕಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದಲ್ಲಿ  ಬುಧವಾರ ನಡೆದಿದೆ. ನಗರದ ಹಾರನಹಳ್ಳಿ ಹೈಯರ್ ಎಜುಕೇಷನ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿ ರವೀಶ್ ಎಂಬಾತ ತನ್ನ ಬೈಕನ್ನು ಚಾಲನೆ ಮಾಡಲು ಮುಂದಾದಾಗ ಈ ಘಟನೆ ನಡೆದಿದೆ.
 ವಿಕ್ಟರ್ ಬೈಕನ್ನು ಎಂದಿನಂತೆ ಬೈಕ್ ಸ್ಟಾಂಡ್‌ನಲ್ಲಿ ನಿಲ್ಲಿಸಿ ನಂತರ ಹೊರ ಹೋಗಲು ಬೈಕ್ ಚಾಲನೆ ಮಾಡಿದ್ದಾನೆ. ಆದರೆ  ಸ್ವಲ್ಪ ದೂರದಲ್ಲಿಯೇ ಬೆಂಕಿ ಉರಿಯಲು ಆರಂಭಿಸಿದೆ. ತಕ್ಷಣವೇ ವಿದ್ಯಾರ್ಥಿಗಳು ಬೆಂಕಿ ನಂದಿಸಲು  ಪ್ರಯತ್ನಿಸಿದ್ದಾರೆ.  ವಿಷಯ ತಿಳಿದ ತಕ್ಷಣ ಅಗ್ನಿಶಾಮಕದಳದವರು ಸ್ಥಳಕ್ಕೆ ಆಗಮಿಸಿ ಆಗುತ್ತಿದ್ದ ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ. ಬೈಕಿನ ಸ್ವಲ್ಪ ಭಾಗ ಸುಟ್ಟು ಹೋಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.