ಮಕ್ಕಳಿಂದ ಮತದಾರರ ಜಾಗೃತಿ ಅಭಿಯಾನ
ಕ.ಪ್ರ. ವಾರ್ತೆ, ಹಾಸನ, ಏ.12
ಪ್ರತಿ ಮತದಾರನು ತಮ್ಮ ಹಕ್ಕನ್ನು ಚಲಾಯಿಸಿದಾಗ ಮಾತ್ರ ಚುನಾವಣಾ ವ್ಯವಸ್ಥೆ ಮತ್ತಷ್ಟು ಶಕ್ತಿಯುತವಾಗಲಿದೆ ಎಂದು ಹಾಸನ ತಾ. ತಹಸೀಲ್ದಾರ್ ಮಂಜುನಾಥ್ ಹೇಳಿದರು.
ಚುನಾವಣಾ ಆಯೋಗದ ಸೂಚನೆಯಂತೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವಕ್ಕಾಗಿ ರಚಿಸಿರುವ ಜಿಲ್ಲಾ ಸಮಿತಿಯಿಂದ ನಗರದ ಸಿ.ಕೆ.ಎಸ್. ಶಾಲೆಯಲ್ಲಿ ಏರ್ಪಡಿಸಿದ್ದ ಕಡ್ಡಾಯ ಮತದಾನ ಪ್ರತಿಜ್ಞಾ ವಿಧಿ ಪತ್ರಗಳನ್ನು ವಿದ್ಯಾರ್ಥಿಗಳ ಮೂಲಕ ಪೋಷಕರಿಗೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಬಾರಿ ಚುನಾವಣಾ ಆಯೋಗ ಮತದಾರರ ನೊಂದಣಿ ಹಾಗೂ ಜಾಗೃತಿಗಾಗಿ ವಿಶೇಷ ತಂಡವನ್ನು ರಚಿಸಿ ಶ್ರಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳು ಅರಿತು ತಮ್ಮ ಪೋಷಕರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಕೋರಿದರು.
ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಸದಸ್ಯರೂ ಆಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜ್ ಮಾತನಾಡಿ, ಮಕ್ಕಳು ಪ್ರೀತಿಯಿಂದ ತಮ್ಮ ಪೋಷಕರ ಮನಸ್ಸು ಗೆಲ್ಲಬಲ್ಲರು ಮತ್ತು ಅರಿವು ಮೂಡಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಪ್ರತಿ ವಿದ್ಯಾರ್ಥಿಯೂ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ,ತಾಯಿ, ಅಜ್ಜ, ಅಜ್ಜಿ, ಚಿಕ್ಕಮ್ಮ, ಚಿಕ್ಕಪ್ಪ, ಬಂದು ಬಳಗ ನೆರೆಹೊರೆಯವರು ಕಡ್ಡಾಯವಾಗಿ ಮತ ಹಾಕುವಂತೆ ನೋಡಿಕೊಳ್ಳಬೇಕು ಎಂದರು.
ಇದೇ ವೇಳೆ ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯ ಮತ್ತು ಮುಕ್ತ, ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿ ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳಿಗೆ ಪ್ರಭಾವಿತರಾಗದೆ ಮತ ಚಲಾಯಿಸಲು ತಮ್ಮ ತಂದೆ ತಾಯಿಗಳನ್ನು ಪ್ರೇರೇಪಿಸುವಂತೆ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಜಿಪಂ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಹನುಮಂತಪ್ಪ, ಯುವಜನ ಸೇವಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಿವಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಪುಟ್ಟರಾಜು, ಸಿಕೆಎಸ್ ಕಾಲೇಜಿನ ಪ್ರಾಂಶುಪಾಲೆ ಜಯಾ ಸುರೇಶ್, ಉಪ ಪ್ರಾಂಶುಪಾಲೆ ಚಂಪಾ ರತ್ನ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಈಶ್ವರಪ್ಪ ಇತರರು ಇದ್ದರು. ಜಿಲ್ಲಾ ವಾರ್ತಾಧಿಕಾರಿ ವಿನೋದ್,ಚಂದ್ರ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

