ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಬಿ.ಶಿವರುದ್ರಪ್ಪ
ಕ.ಪ್ರ. ವಾರ್ತೆ, ಬೇಲೂರು, ಏ.12
ಕೆಜೆಪಿಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿ ನಂತರ ಎಚ್.ಎಂ ವಿಶ್ವನಾಥ್,ಗೆ ಟಿಕೆಟ್ ನೀಡಿ ತಮಗೆ ವಂಚನೆ ಮಾಡಲಾಗಿದೆ. ತಾಲೂಕಿನ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಹಾಗೂ ಒತ್ತಾಯ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಬಿ.ಶಿವರುದ್ರಪ್ಪ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಾವು ಬಿಜೆಪಿ
ಯಿಂದ ಸ್ಪರ್ಧಿಸಿ 2 ನೇ ಸ್ಥಾನ ಪಡೆದಿದ್ದೆ. ತಾಲೂಕಿನ ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದ ಯಡಿಯೂರಪ್ಪನವರು, ಬಿ. ಶಿವರುದ್ರಪ್ಪಗೆ ಟಿಕೆಟ್ ನೀಡುತ್ತೇನೆ, ಎಲ್ಲರೂ ಕೆಲಸ ಮಾಡಿ ಎಂದು ಹೇಳಿ ಕಳುಹಿಸಿದ್ದರು. ಯಡಿಯೂರಪ್ಪ ಅಣತಿ ಮೇರೆಗೆ ತಾವು ತಾಲೂಕಿನಲ್ಲಿ 50 ಕ್ಕೂ ಹೆಚ್ಚು ಗ್ರಾಮಗಳಿಗೆ ತೆರಳಿ ಪ್ರಚಾರ ಕೈ ಗೊಂಡು ಪಕ್ಷದ ಸಂಘಟನೆಯಲ್ಲಿ ನಿರತರಾಗಿದ್ದೆವು. ನಾವುಗಳು ಕಾರ್ಯಕರ್ತರ ಸಂಘಟನೆ ಮಾಡಿದ ನಂತರ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್,ಗೆ ಟಿಕೆಟ್ ನೀಡಿದ್ದು, ಇದರಿಂದ ಮನಸ್ಸಿಗೆ ನೋವಾಗಿದ್ದು ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸುವುದಾಗಿ ತಿಳಿಸಿದರು.
ಸ್ವತಂತ್ರವಾಗಿ ಸ್ಪರ್ಧೆ ಮಾಡುವ ನಿರ್ಧಾರ ಮಾಡಿದ ನಂತರದಲ್ಲಿ ಬಿಎಸ್,ಪಿ ಪಕ್ಷದ ಕೆಲ ನಾಯಕರು ನೀವುಗಳು ನಮ್ಮ ಪಕ್ಷಕ್ಕೆ ಬನ್ನಿ ಕರೆದಿದ್ದರು. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

