ಸೆಸ್ಕ್ ಶಾಖಾಧಿಕಾರಿ ಖಾಸಗಿ ಗುತ್ತಿಗೆ: ಬ್ಯಾಕರವಳ್ಳಿ ಮಲ್ಲೇಶ್ ಆರೋಪ
ಕ.ಪ್ರ.ವಾರ್ತೆ, ಸಕಲೇಶಪುರ, ಏ.12
ಯಸಳೂರು ವಲಯ ಸೆಸ್ಕ್ ಇಲಾಖೆ ಶಾಖಾಧಿಕಾರಿ ಕುಮಾರಸ್ವಾಮಿ ಅನಧಿಕೃತವಾಗಿ ಖಾಸಗಿ ವಿದ್ಯುತ್ ಗುತ್ತಿಗೆ ನಿರ್ವಹಿಸುತ್ತಿದ್ದಾರೆಂದು ಖಾಸಗಿ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬ್ಯಾಕರವಳ್ಳಿ ಮಲ್ಲೇಶ್ ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಸಳೂರು ವಲಯ ಶಾಖಾಧಿಕಾರಿ ಕುಮಾರಸ್ವಾಮಿ ತಮ್ಮ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲೈನ್ಮ್ಯಾನ್ ರಾಘು ಹಾಗೂ ಸುರೇಶ್ ಎಂಬುವರನ್ನು ಬಳಸಿಕೊಂಡು ತಾವೆ ಅತಿ ಕಡಿಮೆ ದರದಲ್ಲಿ ವಿದ್ಯುತ್ ಗುತ್ತಿಗೆ ಪಡೆಯುತ್ತಿದ್ದಾರೆ. ಇದರಿಂದಾಗಿ ಖಾಸಗಿ ವಿದ್ಯುತ್ ಗುತ್ತಿಗೆದಾರರಿಗೆ ಕೆಲಸವಿಲ್ಲದಾಗಿದ್ದು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.
ಚೆಸ್ಕಾಂ ಇಲಾಖೆ ನಿಯಮಗಳ ಪ್ರಕಾರ ಖಾಸಗಿ ವಿದ್ಯುತ್ ಗುತ್ತಿಗೆದಾರರು ನಿರ್ವಹಿಸ ಬೇಕಾದ ಕೆಲಸಗಳನ್ನು ಇವರೇ ನಿರ್ವಹಿಸುತ್ತಿದ್ದು ಇವರ ವಿರುದ್ಧ ಉನ್ನತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ತಾಲೂಕು ಖಾಸಗಿ ವಿದ್ಯುತ್ ಗುತ್ತಿಗೆದಾರರು ಪ್ರತಿಭಟನೆ ನಡೆಸುವರು ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ಪ್ರಶಾಂತ, ಜಗದೀಶ್, ಸುಬ್ರಮಣ್ಯ, ರವಿಕುಮಾರ್, ರಂಗನಾಥ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

