ಹಾಸನ

ಸ್ಥಿರ ಸರ್ಕಾರಕ್ಕಾಗಿ ಎಲ್ಲರಿಂದ ಮತದಾನ ಅಗತ್ಯ: ಶಾಂತಾ

Published On :

ಚನ್ನರಾಯಪಟ್ಟಣ: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಇರುವುದರಿಂದ ಅರ್ಹರನ್ನು ಆಯ್ಕೆ ಮಾಡಿ ಸ್ಥಿರ ಸರ್ಕಾರ ತರುವ ನಿಟ್ಟಿನಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಕರ್ತವ್ಯವಾಗಿರುವುದರಿಂದ ಹೆಚ್ಚು ಹೆಚ್ಚು ಮತದಾರರರು ಮತದಾನ ಮಾಡಲು ಮುಂದೆ ಬರಬೇಕೆಂದು ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕಿ ಶಾಂತ ಹೇಳಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಹಾಸನದ ಅನನ್ಯ ಟ್ರಸ್ಟ್, ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ   ಆಶ್ರಯದಲ್ಲಿ ತಾಲೂಕಿನ ಉದಯಪುರ ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ ಮತದಾರರ ಶಿಕ್ಷಣ ಹಾಗೂ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮತದಾರರು ಯಾವುದೆ ಆಮಿಷಕ್ಕೆ ಒಳಗಾಗದೆ ತಪ್ಪದೇ ಮತ ಚಲಾಯಿಸಲು ತಿಳಿಸಿದರು.
ಅನನ್ಯ ಟ್ರಸ್ಟ್,ನ ಕೆ.ಟಿ.ಜಯಶ್ರೀ, ಮತದಾನದ ಹಕ್ಕನ್ನು  ಸದ್ವಿನಿಯೋಗ ಪಡಿಸಿಕೊಳ್ಳಬೇಕು. ಮತದಾರರು ತಮ್ಮ ಹೆಸರನ್ನು ಮತ ಪಟ್ಟಿಯಲ್ಲಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳ ಬೇಕೆಂದರು. ಕ್ಷೇತ್ರ ಪ್ರಚಾರ ಇಲಾಖೆ ಸಹಾಯಕ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ರಂಗಯ್ಯ, ಶಿವಕುಮಾರ್, ಅಂಗನವಾಡಿ ಕಾರ್ಯಕರ್ತೆ ಪದ್ಮಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.