ಹಾಸನ

ಹೆಜ್ಜೇನು ದಾಳಿ: 20 ಜನರಿಗೆ ಗಾಯ

Published On :

ಕನ್ನಡಪ್ರಭ ವಾರ್ತೆ , ಹೊಳೆನರಸೀಪುರ , ಏ.12
ಯುಗಾದಿ ಹಬ್ಬದ ಸಂಭ್ರಮಾಚರಣೆ ಜತೆಯಲ್ಲಿ ಸಂಪ್ರದಾಯದಂತೆ ಗ್ರಾಮದಲ್ಲಿ ಹೊನ್ನಾರು ಕಟ್ಟುವ ಸಂದರ್ಭದಲ್ಲಿ ವಾದ್ಯದ ಸದ್ದಿಗೆ ಮರದಲ್ಲಿದ್ದ ಹೆಜ್ಜೇನುಗಳು ದಾಳಿ ಮಾಡಿದ ಕಾರಣ 9 ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಹಳ್ಳಿಮೈಸೂರು ಹೋಬಳಿಗೆ ಸೇರಿದ ಕ್ಯಾತನಹಳ್ಳಿ ಸಮೀಪದ ಎಳೇಗೌಡನಕೊಪ್ಪಲು ಗ್ರಾಮದಲ್ಲಿ ಗುರುವಾರ ನಡೆದಿದೆ.
 ಯುಗಾದಿ ಹಬ್ಬದಂದು ಸಂಜೆ ವಾಡಿಕೆಯಂತೆ ಹೊನ್ನಾರು ಕಟ್ಟಿ ಗ್ರಾಮದಲ್ಲಿನ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವ ಸಂದರ್ಭದಲ್ಲಿ, ದೇವಾಲಯ ಸಮೀಪದಲ್ಲೇ ಇದ್ದ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ವಾದ್ಯದ ಸದ್ದಿಗೆ ಎದ್ದು, ಹೊನ್ನಾರು ಜೊತೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಜನರ ಮೇಲೆ ದಾಳಿ ಮಾಡಿವೆ.
ದಿಢೀರನೆ ನಡೆದ ಈ ಘಟನೆಯಿಂದಾಗಿ ಬೆದರಿದ ಗ್ರಾಮಸ್ಥರು ದಿಕ್ಕಾಪಾಲಾಗಿ ಓಡಿದರೂ ಬಿಡದ ಹೆಜ್ಜೇನುಗಳು 9ಕ್ಕೂ ಹೆಚ್ಚು ಮಕ್ಕಳೂ ಸೇರಿದಂತೆ 50ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ. ಹೆಜ್ಜೇನು ದಾಳಿಯಿಂದಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಹೆಚ್ಚಾಗಿ ಗಾಯಗೊಂಡಿದ್ದ ಸುಮಾರು 20ಕ್ಕೂ ಹೆಚ್ಚು ಜನರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ರಾತ್ರಿಯೇ ದಾಖಲಿಸಲಾಗಿದೆ. ಇನ್ನುಳಿದಂತೆ ಕೆಲವರನ್ನು ಸಾಲಿಗ್ರಾಮ, ಮತ್ತಿತರ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
 ಹೆಜ್ಜೇನು ದಾಳಿಯಲ್ಲಿ ಗಾಯಗೊಂಡವರನ್ನು ಸಮೀಪದ ಹಳ್ಳಿಮೈಸೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಸಂಜೆ ವೇಳೆ ಯಾವ ವೈದ್ಯರೂ ಸೇವೆಯಲ್ಲಿಲ್ಲದ ಕಾರಣ ನಂತರ ಅವರನ್ನು ತುರ್ತು ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು. ಕೇಂದ್ರ ಸ್ಥಾನದಲ್ಲಿ ವೈದ್ಯರು ಇಲ್ಲದ ಕಾರಣ ತುರ್ತು ಸೇವೆಗಳಿಗೆ ಸಾರ್ವನಿಕರಿಗೆ ಆಗುತ್ತಿರುವ ಅನಾನುಕೂಲ ತಪ್ಪಿಸಿ, ವೈದ್ಯರು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆದೇಶಿಸುವಂತೆ ಗ್ರಾಮಸ್ಥರು ತಾಲೂಕು ಆರೋಗ್ಯಾಧಿಕಾರಿಗಳನ್ನು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.