ಹಾಸನ

ಹೊಳೆನರಸೀಪುರ: ರಾಜಕೀಯ ಪಕ್ಷಗಳ ಮುಖಂಡರ ಸಭೆ

Published On :

ಹೊಳೆನರಸೀಪುರ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಉಪವಿಭಾಗಧಿಕಾರಿ ಜಗದೀಶ್ ಅಧ್ಯಕ್ಷತೆಯಲ್ಲಿ ನೀತಿ ಸಂಹಿತೆ ವಿಚಾರ ಕುರಿತು ತಾಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು. ಸಂಜೆ 4.30ಕ್ಕೆ  ಆರಂಭವಾದ ಸಭೆಯಲ್ಲಿ ನಾನಾ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದು ಚುನಾವಣೆ ನೀತಿ ಸಂಹಿತೆ ಬಗ್ಗೆ ಮಾಹಿತಿ ಪಡೆದರು.
ಸಭೆಯಲ್ಲಿ ಮಾಹಿತಿ ನೀಡಿದ ಜಗದೀಶ್, ಪ್ರಸಕ್ತ ಚುನಾವಣೆಯಲ್ಲಿ ಚುನಾವಣೆ ಅಧಿಕಾರಿಗಳು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಖರ್ಚು ವೆಚ್ಚಗಳ ಬಗ್ಗೆ ಅಯಾ ದಿನವೇ ಚುನಾವಣಾ ಅಧಿಕಾರಿಗಳಿಗೆ
ಮಾಹಿತಿ ತಲುಪಿಸಬೇಕು ಎಂದರು. ಪ್ರತಿ ಮತಗಟ್ಟೆ ಬಗ್ಗೆ ಅಧಿಕಾರಿಗಳು ಕಟ್ಟೇಚ್ಚರ ವಹಿಸಿದ್ದು ಯಾವೊಂದು ಕಾರಣಕ್ಕೂ ಈ ಭಾರಿ ಅಕ್ರಮ ಮತದಾನ ಮಾಡಲು ಸಾಧ್ಯವಿಲ್ಲ. ಜತೆಗೆ ರಾಜಕೀಯ ಪಕ್ಷಗಳು ನಡೆಸುವ ಅಬ್ಬರದ ಪ್ರಚಾರವಿರಲಿ ಏನೇ ಇರಲಿ ಎಲ್ಲವನ್ನು ಚುನಾವಣಾ ಅಧಿಕಾರಿಗಳು ಗಮನ ಹರಿಸುತ್ತಿರುತ್ತಾರೆ. ಆದ್ದರಿಂದ ರಾಜಕೀಯ ಪಕ್ಷದವರು ಚುನಾವಣೆ ನೀತಿ ಸಂಹಿತೆಯಂತೆ ವರ್ತಿಸಬೇಕಾಗಿದೆ. ಯಾವುದೇ ಕಾರಣಕ್ಕೂ  ಚುನಾವಣಾ ಅಧಿಕಾರಿಗಳ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದ ಅವರು,  ಅದಕ್ಕಾಗಿ ಪ್ರತಿ ಕ್ಷೇತ್ರದಲ್ಲಿ ನಾನಾ  ದಳಗಳನ್ನು ರಚಿಸಿ ಇಂದಿನಿಂದಲೇ ತನ್ನ ಕರ್ತವ್ಯ ಆರಂಭಿಸಿದೆ ಎಂದರು.  ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಮಂಜುಳಾ,    ಇಲಾಖೆ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.