ಎಚ್.ಕೆ. ಕುಮಾರಸ್ವಾಮಿ ಅಸಮರ್ಥ ಶಾಸಕ
ಕನ್ನಡಪ್ರಭ ವಾರ್ತೆ ಸಕಲೇಶಪುರ ಏ.13
ಕ್ಷೇತ್ರದ ಬಗ್ಗೆ ಕಾಳಜಿ ಇಲ್ಲದ ಅಸಹಾಯಕ, ಅಸಮರ್ಥ ಶಾಸಕ ಎಚ್.ಕೆ. ಕುಮಾರಸ್ವಾಮಿ ಎಂದು ಆರೋಪಿಸಿರುವ ಬಿಜೆಪಿ ಅಭ್ಯರ್ಥಿ ಡಾ.ಎಚ್.ಆರ್. ನಾರಾಯಣಸ್ವಾಮಿ ಅವರು, ಕುಮಾರಸ್ವಾಮಿ ವಿರುದ್ಧ ಪ್ರಗತಿಯ ಧ್ಯೇಯದೊಂದಿಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ಸಮಸ್ಯೆಯಲ್ಲಿದ್ದಾಗ ಶಾಸಕರು ವಿದೇಶ ಪ್ರವಾಸದಲ್ಲಿದ್ದರೂ ಅಲ್ಲಿ ಅವರು ಕಲಿತು ಈ ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾದರೂ ಏನು ಈ ಬಗ್ಗೆ ಜನರಿಗೂ ಅರಿವು ಇದೆ. ಮತದಾರರು ಈ ಚುನಾವಣೆಯಲ್ಲಿ ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಯಡಕೇರಿ ಮತ್ತು ವಳಲಹಳ್ಳಿಯಲ್ಲಿ ಹೊಸ ಆಸ್ಪತ್ರೆಗೆ ಮಂಜೂರಾತಿ ದೊರಕಿತ್ತು, ಜೊತೆಗೆ ಶಾಲಾ ಕಾಲೇಜುಗಳಿಗೆ ರಾಜ್ಯ ಸರಕಾರದ ಬಂದಿದ್ದ ಅನುದಾನದ ಹಣ ಇವರ ನಿರ್ಲಕ್ಷ್ಯತನದಿಂದ ಕೆಲಸಗಳು ಆಗದೆ ವಾಪಸ್ ಹೋಗಿದೆ. ಅಲ್ಲದೆ ಆರೋಗ್ಯ ಮತ್ತು ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಕುಮಾರಸ್ವಾಮಿಯವರಿಗಿಲ್ಲ ಎಂದು ದೂರಿದರು.
ಸಾಕಷ್ಟು ಅನುದಾನ ಬಿಡುಗಡೆ: ರಾಜ್ಯ ಬಿಜೆಪಿ ಸರ್ಕಾರ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದರೂ ಅದನ್ನು ಸಮರ್ಥವಾಗಿ ಬಳಸಿ
ಕೊಳ್ಳಲಿಲ್ಲ ಎಂದರಲ್ಲದೇ, ಸರಕಾರಕ್ಕೆ ನಾವು ಸಲ್ಲಿಸಿದ್ದ ಮನವಿಗೆ ಸುಮಾರು 150 ಕೋಟಿ ರಸ್ತೆ ಅಭಿವೃದ್ಧಿಗಾಗಿ ಹಣ ಮಂಜೂರಾಗಿದೆ. ಬಿಸ್ಲೆ,
ಸುಬ್ರಮಣ್ಯ ರಸ್ತೆ ಕಾಮಗಾರಿಗೆ ಟೆಂಡರ್ ಆಗಿದೆ ಎಂದು ಹೇಳಿದರು.
ದಲಿತನಾಗಿ ಹುಟ್ಟಿ, ಮೀಸಲು ಕ್ಷೇತ್ರದಲ್ಲಿ ಗೆದ್ದರೂ ದಲಿತ ಸಮಾಜಕ್ಕಾಗಿ ಇವರು ಮಾಡಿದ್ದಾರು ಏನು ಎಂಬುದು ಎಲ್ಲರಿಗೊ ತಿಳೀದಿದೆ. ಗಂಗಾ ಕಲ್ಯಾಣ ಯೋಜನೆಯಲ್ಲಿ ಒಂದೇ ಒಂದು ಬಾವಿ ತೆಗೆಸಲಿಲ್ಲ ಎಂದು ಟೀಕಿಸಿದರು.
ಪಕ್ಷದ ವಕ್ತಾರ ಕ್ಯಾಮನಹಳ್ಳಿ ರಾಜಕುಮಾರ್ ಮಾತನಾಡಿ, 5 ವರ್ಷದಲ್ಲಿ ಬಿಜೆಪಿ ಸರ್ಕಾರ ನಾನಾ ಯೋಜನೆಗಳನ್ನು ಹಮ್ಮಿಕೊಂಡು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದು ಕೊಂಡು ಹೋದ ಸಾಧನೆ ಹಾಗೂ ಈ ಕ್ಷೇತ್ರದಲ್ಲಿ ಶಾಸಕರು ಪ್ರಗತಿ ಕಾರ್ಯ ಮಾಡದೆ ಹಲವು ಸಮಸ್ಯೆಗಳನ್ನು ಜನತೆ ಎದುರಿಸುತ್ತಿದ್ದಾರೆ ಮತದಾರರು ಅವಕಾಶ ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ಎಲ್ಲ ಸಮಸ್ಯೆಗಳಿಗೆ ಬಿಜೆಪಿ ಶಾಶ್ವತ ಪರಿಹಾರ ತಂದು ಕೊಡುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ವಿವರಿಸಿದರು.
ಪಕ್ಷದ ತಾಲೂಕು ಅಧ್ಯಕ್ಷ ಹೊಂಗಡಹಳ್ಳ ಧರ್ಮರಾಜ್ ಮಾತನಾಡಿ, ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಖಚಿತ. ಏ. 15 ಸೋಮವಾರ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಡಾ.ನಾರಾಯಾಣಸ್ವಾಮಿ ನಾಮಪತ್ರ ಸಲ್ಲಿಸುವರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಕಾರ್ಯದರ್ಶಿ ಹೆಬ್ಬನಹಳ್ಳಿ ಸಂದೇಶ, ನಗರ ಅಧ್ಯಕ್ಷ ದಯಾನಂದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

