ಕಾಂಗ್ರೆಸ್ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಶ್ರಮಿಸಿ
ಕ.ಪ್ರ. ವಾರ್ತೆ ಜಾವಗಲ್ ಏ.13
ಮುಂಬರುವ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸ ಬೇಕೆಂದು ಶಾಸಕ ರುದ್ರೇಶಗೌಡ ತಿಳಿಸಿದರು.
ಜಾವಗಲ್ನಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು. ತಮ್ಮ 5 ವರ್ಷಗಳ ಅಧಿಕಾರಾವಧಿಯಲ್ಲಿ ಕ್ಷೇತ್ರದ ಪ್ರಗತಿಗೆ ಶಕ್ತಮೀರಿ ಶ್ರಮಿಸಿದ್ದೇನೆ. ಬೇಲೂರು ಕ್ಷೇತ್ರದ ಎಲ್ಲಾ ಹೋಬಳಿಗಳಲ್ಲೂ ಸಮಾನವಾಗಿ ಅಭಿವೃದ್ಧಿ ಕೈಗೊಂಡಿದ್ದೇನೆ ಜಾವಗಲ್ ಹೋಬಳಿ ಬರಗಾಲ ಪ್ರದೇಶವಾಗಿದ್ದು ವಿವಿಧ ಯೋಜನೆಯಡಿ ಕೋಟ್ಯಂತರ ರು. ಅಭಿವೃದ್ಧಿ ಕೆಲಸ ಮಾಡಿಸಿರುವುದಾಗಿ ತಿಳಿಸಿದರು.
ಪ್ರಸ್ತುತ ವರ್ಷದಲ್ಲಿ ಶಾಲೆ, ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಜಾವಗಲ್ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಸುತ್ತಲಿನ ರಸ್ತೆ ಅಭಿವೃದ್ಧಿಗೆ ಕೋಟಿ ರು. ನೀಡಲಾಗಿದೆ. ಯಾವುದೇ ಪಕ್ಷಪಾತ ಮಾಡಿಲ್ಲ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಕಾರ್ಯಕರ್ತರು ಬದಿಗೊತ್ತಿ ಮುಂಬರುವ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತ ನೀಡುವಂತೆ ಕೋರಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಹಳ್ಳಿ ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಬೇಲೂರು ಕ್ಷೇತ್ರ ಕಾಂಗ್ರೆಸ್ ಅಧ್ಯಕ್ಷ ದಾಮೋದರ್, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಶ್ರೀಕಂಠಯ್ಯ, ತಾಪಂ ಸದಸ್ಯರಾದ ಲಕ್ಷ್ಮೀ, ರಾಜೇಶ್ವರಿ, ಗ್ರಾಪಂ ಮಾಜಿ ಸದಸ್ಯ ನರಸಿಂಹಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ದೇಶಾಣಿ ಆನಂದ್ ಮಹದೇವಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸೋಮೇಗೌಡ, ತಾಪಂ ಮಾಜಿ ಸದಸ್ಯ ಸೋಮಶೇಖರ್ ಮಹಾಲಿಂಗಪ್ಪ, ತಿಮ್ಮಶೆಟ್ಟಿ ಗ್ರಾಪಂ ಉಪಪ್ರಧಾನ್ ಕರಿಯಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಧನಂಜಯ, ಬಸವರಾಜು, ಚನ್ನಬಸಪ್ಪ, ಶಿವಣ್ಣ, ಅಕ್ರಂ, ಚಿಕ್ಕಯ್ಯ, ನೀಲಕಂಠಪ್ಪ, ಮಹಾದೇವಪ್ಪ, ವಿಜಯಕುಮಾರ್ ಗಂಗಪ್ಪ, ರಮೇಶ್, ಚಂದ್ರಶೇಖರ್, ಬಿಂಧುಮಾಧವ್ ಮಾತನಾಡಿದರು.
ಜಿಪಂ ಮಾಜಿ ಸದಸ್ಯ ಕೃಷ್ಣೇಗೌಡ, ಭಾಗ್ಯ ರಾಜೇಗೌಡ, ಎಸ್ಸಿ ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಗ್ರಾಪಂ ಅಧ್ಯಕ್ಷ ಕರಿಯಯ್ಯ ಉಪಾಧ್ಯಕ್ಷ ರಂಗಸ್ವಾಮಿ ಸದಸ್ಯ ರೋಹಿತ್ ಅಖೀಲ್ ಜಲೀಲ್ ಇದ್ದರು
ಸೇರ್ಪಡೆ: ಇದೇ ವೇಳೆ ಕರಗುಂದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮಾಪತಿ, ನಾಗರಾಜು, ಕಾಂತಯ್ಯ, ರಂಗಸ್ವಾಮಿ, ಬಸವರಾಜು, ರವಿ ನಂಜುಂಡ, ರಂಗಸ್ವಾಮಿ ದಾಸಪ್ಪ, ರೇಣುಕಾ ಚಂದ್ರಣ್ಣ ರಾಮಸ್ವಾಮಿ ಶೇಖರ್ ಮಂಜುನಾಥ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

