ಪುಟ್ಟೇಗೌಡಗೆ ಬಿ.ಫಾರಂ ವಿರೋಧಿಸಿ ಪಕ್ಷಕ್ಕೆ ಗುಡ್ಬೈ?
ಕ.ಪ್ರ. ವಾರ್ತೆ ಚನ್ನರಾಯಪಟ್ಟಣ ಏ.14
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಅವರಿಗೆ ಬಿ.ಫಾರಂ ನೀಡಿರುವುದನ್ನು ವಿರೋಧಿಸಿ ಪಕ್ಷದ ಕೆಲ ನಾಯಕರು ಪಕ್ಷಕ್ಕೆ ಗುಡ್ಬೈ ಹೇಳುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ನಿಂದ ಬಿ.ಫಾರಂ ಗಿಟ್ಟಿಸಲು ಕಡೆಗಳಿಗೆಯವರೆಗೆ ಸತತ ಪ್ರಯತ್ನ ನಡೆಸಿದ ಹಿರೀಸಾವೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎ. ಗೋಪಾಲಸ್ವಾಮಿ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕನ್ನಡಪ್ರಭದೊಂದಿಗೆ ಮಾತನಾಡಿ ತಾವು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ನ್ನು ಸಂಘಟಿಸಿ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಸ್ವಂತ ಹಣ ಖರ್ಚು ಮಾಡಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕ್ಷೇತ್ರದಿಂದ ಇಬ್ಬರು ಆಯ್ಕೆಯಾಗಲು ಕಾರಣನಾಗಿದ್ದೇನೆ. ಜಿಲ್ಲಾ ನಾಯಕರುಗಳಾರು ಈ ಕೆಲಸ ಮಾಡಲಿಲ್ಲ. ಅಂದು ತಾನು ಕಾಂಗ್ರೆಸ್ ಮರ್ಯಾದೆ ಉಳಿಸಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಸ್ವಾಗತಿಸಿದ್ದು ಇಂದು ತನ್ನನ್ನು ತಿರಸ್ಕರಿಸಿರುವುದು ಖಂಡನೀಯ ಎಂದು ತಿಳಿಸಿದರು.
ತಾವೂ ಸೇರಿದಂತೆ ತಮ್ಮ ನಿಕಟ ಸಂಪರ್ಕದಲ್ಲಿರುವವರು ಕಾಂಗ್ರೆಸ್ಗೆ ಗುಡ್ಬೈ ಹೇಳಲಿದ್ದು, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮೋಹನ್ಕುಮಾರ್ ಇಂದೇ ರಾಜಿನಾಮೆ ಸಲ್ಲಿಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಹಲವು ಮಂದಿ ಕಾಂಗ್ರೆಸ್ಗೆ ಗುಡ್ಬೈ ಹೇಳಲಿದ್ದಾರೆ ಎಂದರು. ಸೋಮವಾರ ತಾವು ತಮ್ಮ ಬೆಂಬಲಿಗರೊಂದಿಗೆ ಬಂಡಾಯ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಲಿದ್ದು, ಆ ನಂತರದಲ್ಲಿ ತಮ್ಮ ರಾಜಕೀಯ ಜೀವನವನ್ನು ಯಾವ ಪಕ್ಷದಲ್ಲಿ ಕಳೆಯಬೇಕೆಂದು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

