ಹೊಳೆನರಸೀಪುರ ಜನ್ಮ ನೀಡಿದ ರಾಜಕೀಯ ಕ್ಷೇತ್ರ
ಕನ್ನಡಪ್ರಭ ವಾರ್ತೆ ಹಾಸನ ಏ 14
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾದರೆ ಅದು ಹೊಳೆನರಸೀಪುರ ಕ್ಷೇತ್ರದಿಂದ ಮಾತ್ರ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು. ಹೊಳೆನರಸೀಪುರ ಕ್ಷೇತ್ರದ ಕುಂದೂರುಮಠದಲ್ಲಿ ಭಾನುವಾರ ನಡೆದ ದಂಡಿಗನಹಳ್ಳಿ ಹೋಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ನನಗೆ ರಾಜಕೀಯ ಜನ್ಮ ನೀಡಿದ ಹೊಳೆನರಸೀಪುರ ಕ್ಷೇತ್ರ ಬಿಟ್ಟು ಬೇರೆಲ್ಲೂ ಹೋಗುವ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಇದ್ದರೆ ಕ್ಷೇತ್ರದ ಜನತೆಯೊಂದಿಗೆ ಇರುತ್ತೇನೆ ಎಂದ ಅವರು, ದಂಡಿಗನಹಳ್ಳಿ ಹೋಬಳಿಯಲ್ಲಿ ಅವಶ್ಯಕತೆ ಇರುವ ಎಲ್ಲಾ ಕಡೆ ಶಾಲಾ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ ಎಂದು ಹೇಳಿದರು. ಕಾಚೇನಹಳ್ಳಿ ಏತ ನೀರಾವರಿ ಯೋಜನೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಹಣ ಬಿಡುಗಡೆ ಮಾಡಿಸಿದ್ದು, ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಸಂದರ್ಭದಲ್ಲಿ ಕೆಲವರು ನಾವೇ ಮಾಡಿಸಿದ್ದೇವೆ ಎಂದು ಹೇಳಿಕೆ ನೀಡಿ ಪ್ರಚಾರ ಪಡೆಯುತ್ತಿದ್ದಾರೆ. ಜೆಡಿಎಸ್ ಅವಧಿಯಲ್ಲಿ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ ಎಂಬುದನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.
ದಂಡಿಗನಹಳ್ಳಿ ಹೋಬಳಿ ಗ್ರಾಮಗಳಿಗೆ ಹೇಮಾವತಿ ನದಿಯಿಂದ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರದಿಂದ ಅನುಮತಿ ದೊರೆತಿದ್ದು, ಚುನಾವಣೆ ಮುಗಿದ ನಂತರ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು. ಅಪಪ್ರಚಾರಕ್ಕೆ ಕಿವಿಗೊಡದೆ ಜೆಡಿಎಸ್ ಬೆಂಬಲಿಸಬೇಕೆಂದು ಮನವಿ ಮಾಡಿದರು. ಜಿಪಂ ಮಾಜಿ ಸದಸ್ಯ ಕೃಷ್ಣೇಗೌಡ, ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಪುಟ್ಟಸ್ವಾಮಿಗೌಡ, ಮುಖಂಡ ಕರಡೇವು ಶಿವಲಿಂಗೇಗೌಡ, ಕರಡೇವು ರವೀಶ್, ಉಮೇಶ್, ದಂಡಿಗನಹಳ್ಳಿ ಮಂಜೇಗೌಡ, ಬಳದರೆ ಅಶೋಕ್ ಇತರರು ಇದ್ದರು. 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

