ಕಷ್ಟದ ಜೀವನದಲ್ಲೂ ಡಾ. ಅಂಬೇಡ್ಕರ್ ಅತ್ಯುತ್ತಮ ಸಾಧನೆ
ಕ.ಪ್ರ.ವಾರ್ತೆ ಬೇಲೂರು ಏ.16
ಡಾ. ಅಂಬೇಡ್ಕರ್ ಅವರು ಕಷ್ಟದ ಜೀವನದಲ್ಲೂ ಅತ್ಯುತ್ತಮ ಸಾಧನೆ ಮಾಡಿದ ಮಹಾನ್ ವ್ಯಕ್ತಿ ಎಂದು ಶಿವಪುರ ಮಹಾಮನೆ ಶ್ರೀ ಬಸವಾನಂದಸ್ವಾಮೀಜಿ ತಿಳಿಸಿದರು.
ಪಟ್ಟಣದಲ್ಲಿ ದಸಂಸ (ಅಂಬೇಡ್ಕರ್ ವಾದ) ಹಮ್ಮಿಕೊಂಡಿದ್ದ ಅಂಬೇಡ್ಕರ್ ಜನ್ಮ ದಿನಾಚರಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿ ಅಂಬೇಡ್ಕರ್ ಅದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಪಣ ತೊಡಬೇಕು. ಜನ್ಮದಿನಾಚರಣೆ 5 ವರ್ಷಗಳಿಂದ ರಕ್ತದಾನ ಮೂಲಕ ಆಚರಿಸುತ್ತಿರುವ ಸಂಘಟನೆಯ ಕೆಲಸ ಶ್ಲಾಘನೀಯ ಎಂದು ತಿಳಿಸಿದರು.
ರಕ್ತದಾನ ಶಿಬಿರದಲ್ಲಿ ಬಸವಾನಂದ ಸ್ವಾಮೀಜಿ ಸೇರಿ 33 ಮಂದಿ ರಕ್ತದಾನ ಮಾಡಿದರು. ಸಂಘಟನೆಯ ಗೌರವ ಸಂಚಾಲಕ ಸುದರ್ಶನ್, ಜಯಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಕೇಬಲ್ ವಿಜಯ್ ಕುಮಾರ, ತಾ.ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್, ಜಿಲ್ಲಾ ಸಂಘಟನೆ ಸಂಚಾಲಕ ನಾರಾಯಣ್ ನಾರ್ವೆ, ಮುಖಂಡ ಕೃಷ್ಣಯ್ಯ, ಹೊಯ್ಸಳ ಶಿವಕುಮಾರ್, ಸತೀಶ್, ಸಂತೋಷ್, ಮಲ್ಲೇಶ್ ಹಾಜರಿದ್ದರು.
ತಾಲೂಕು ಆಡಳಿತದಿಂದ: ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ಅಂಬೇಡ್ಕರ್ ಜನ್ಮದಿನಾಚರಣೆ ಸರಳವಾಗಿ ಆಚರಿಸಲಾಯಿತು. ತಹಸೀಲ್ದಾರ್ ಶಂಕರ್ನಾಯಕ್, ಸಿಪಿಐ ಶ್ರೀಕಾಂತ್,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜರಾಂ ಮತ್ತು ಪುರಸಭಾ ಆರೋಗ್ಯ ನಿರೀಕ್ಷಕ ವೆಂಕಟೇಶ್ ಅಂಬೇಡ್ಕರ್ ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ತಾಲೂಕು ಪಂಚಾಯಿತಿ ಆವರಣದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಕಾವಲು ಪಡೆ ಸಂಘಟನೆಯ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕಾವಲು ಪಡೆ ಅಧ್ಯಕ್ಷ ಪೈಂಟ್ ರವಿ, ನಗರಾಧ್ಯಕ್ಷ ಮಹೇಶ್, ಗೌ.ಅಧ್ಯಕ್ಷ ಆರಾಧ್ಯ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

