ನಾಮಪತ್ರ ಸಲ್ಲಿಕೆ ಸಂಭ್ರಮ: ಟ್ರಾಫಿಕ್ ಜಾಮ್, ಜಾಮ್
ಸಕಲೇಶಪುರ: ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ಎಲ್ಲಾ ಪ್ರಮುಖ ಪಕ್ಷದ ಅಭ್ಯರ್ಥಿಗಳು ಏಕಕಾಲಕ್ಕೆ ಒಂದೇ ದಿನ ಮುಗಿಬಿದ್ದಿದ್ದರಿಂದ ಪಟ್ಟಣದಲ್ಲಿ ಅಸಾಧ್ಯ ಜನದಟ್ಟಣೆ ಹಾಗೂ ಟ್ರಾಫಿಕ್ ಜಾಮ್ ಉಂಟಾಯಿತು. ಜೆಡಿಎಸ್ ಅಭ್ಯರ್ಥಿ ಬೆಂಬಲಿಗರು ಸುಮಾರು 150 ಕ್ಕೂ ಹೆಚ್ಚಿನ ವಾಹನಗಳಲ್ಲಿ ಆಗಮಿಸಿದ್ದರು. ನಾಮಪತ್ರ ಸಲ್ಲಿಸಲು ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಮುಖ್ಯರಸ್ತೆಯಲ್ಲಿ ಮೆರವಣಿಗೆ ಸಾಗಿದ ಕಾರಣ ಸುಮಾರು ಒಂದು ಗಂಟೆಗೂ ಹೆಚ್ಚಿನ ಕಾಲ ಮುಖ್ಯ ರಸ್ತೆ ಬಂದ್ ಆಗಿ ಸಾರ್ವಜನಿಕರು ಪರದಾಡಿದರು. ಅಲ್ಲದೆ ಕೆಜೆಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರ ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿದ್ದರಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಅಲ್ಲಲ್ಲಿ ಟ್ರಾಫಿಕ್ಜಾಮ್ ಉಂಟಾಯಿತು. ಅಭ್ಯರಿರ್ಥಿಗಳ ಬೆಂಬಲಿಗರು ವಿಪರಿತವಾಗಿದ್ದರಿಂದ ಪಟ್ಟಣದ ಬಹುತೇಕ ಎಲ್ಲಾ ಹೋಟೆಲ್ಗಳಲ್ಲೂ ಜನದಟ್ಟಣೆ ಹೆಚ್ಚಾಗಿದ್ದು ಮದ್ಯಾಹ್ನ ಎರಡರ ವೇಳೆಗೆ ಊಟ ಖಾಲಿ ಎಂಬ ನಾಮಫಲಕ ತಗುಲಿಸಿದ್ದು ಕಂಡುಬಂದಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

