ಹಾಸನ

ಸಕಲೇಶಪುರ ಕ್ಷೇತ್ರದಲ್ಲಿ 6 ಉಮೇದುವಾರಿಕೆ

Published On :

ಸಕಲೇಶಪುರ: ವಿಧಾನಸಭಾ ಚುನಾವಣೆಗೆ ಸೋಮವಾರ ಒಟ್ಟು 6 ನಾಮಪತ್ರಗಳು ಸಲ್ಲಿಕೆಯಾದವು.
ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕೆಜೆಪಿ ಅಭ್ಯರ್ಥ್ಥಿಯಾಗಿ ಬೆಳಗೋಡು ಉಮೇಶ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಮಲ್ಲೇಶ್, ಬಿಜೆಪಿ ಅಭ್ಯರ್ಥಿಯಾಗಿ ಡಾ.ನಾರಾಯಣಸ್ವಾಮಿ, ಜೆಡಿಯು, ಅಭ್ಯರ್ಥಿಯಾಗಿ ವೆಂಕಟೇಶ್, ಕೆಜೆಪಿ ಬಂಡಾಯ ಅಭ್ಯರ್ಥಿಯಾಗಿ ಮುಕಂದೂರು ತಿಮ್ಮಯ್ಯ ನಾಮಪತ್ರ ಸಲ್ಲಿಸಿದ ಪ್ರಮುಖರು.
ಬಹುತೇಕ ಎಲ್ಲಾ ಪಕ್ಷದ ಉಮೇದುವಾರರು ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಯಲ್ಲಿ ಉಪವಿಭಾಗಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಅಭ್ಯರ್ಥಿ ಎಚ್.ಕೆ ಕುಮಾರಸ್ವಾಮಿ ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದನ್ನು ಬಿಟ್ಟರೆ ಬೇರೆಲ್ಲ ಅಭ್ಯರ್ಥಿಗಳು ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಬಂದು ನಾಮಪತ್ರ ಸಲ್ಲಿಸಿದರು.  ಮೊದಲಿಗರಾಗಿ ಬಿಜೆಪಿ ಅಭ್ಯರ್ಥಿ, ಎರಡನೆಯವರಾಗಿ ಕೆಜೆಪಿ ಅಭ್ಯರ್ಥಿ, ಮೂರನೇಯವರಾಗಿ ಜೆಡಿಎಸ್ ಅಭ್ಯರ್ಥಿ ಹಾಗೂ ನಾಲ್ಕನೆಯವರಾಗಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.