ಎ.ಮಂಜು ನಾಮಪತ್ರ ಸಲ್ಲಿಕೆ
ಅರಕಲಗೂಡು: ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಎ.ಮಂಜು ನಾಮಪತ್ರ ಸಲ್ಲಿಸಿದರು. ಪತ್ನಿ ತಾರಾ ಜತೆಯಲ್ಲಿದ್ದರು. ಗ್ರಾಮ ದೇವತೆ ದೊಡ್ಡಮ್ಮ ದೇವಿಗೆ ಪೂಜೆ ಸಲ್ಲಿಸಿದ ನಂತರ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಜೆ.ಜಗದೀಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಿಗೆರೆ ಬೈರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಹಳ್ಳಿ ಮೈಸೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಂಬಶಿವಪ್ಪ ಇದ್ದರು.
ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆ
ಅರಸೀಕೆರೆ: ಬಾಣಾವರದ ಪೇಟೆ ನಿವಾಸಿಗಳಾದ ಮುಸ್ಲಿಂ ಜನಾಂಗದ ಪ್ರಮುಖರಾದ ಹಣ್ಣಿನ ವ್ಯಾಪಾರಿ ಅನ್ವರ್ಸಾಬ್ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಗೊಂಡರು. ಜತೆಗೆ ಮುಸ್ಲಿಂ ಸಮಾಜದ ಅಧ್ಯಕ್ಷ ಕೆ.ಸಿ. ಖಾದರ್ ಬಾಷ, ಬಿ.ಜಿ. ಪ್ಯಾರೇಜಾನ್, ಜನಾಬ್ ಹಾಗೂ ಫಯಾಜ್ ಇನ್ನಿತರರು ಜೆಡಿಎಸ್. ಶಾಸಕ ಕೆ.ಎಂ. ಶಿವಲಿಂಗೇಗೌಡರ ಸಮ್ಮುಖದಲ್ಲಿ ಪಕ್ಷ ಸೇರಿದರು. ಇದೇ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಎಂ. ಜಯಣ್ಣ, ಅರಸೀಕೆರೆ ಪುರಸಭಾ ಸದಸ್ಯ ಸಮೀವುಲ್ಲಾ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಸ್. ಆಶೋಕ್, ತಾ.ಪಂ. ಸದಸ್ಯ ಲಕ್ಷ್ಮಣ್, ಆರೀಫ್ ಜಾನ್ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

