ಹಾಸನ

ಕಾವೇರಿ ನ್ಯಾಯ ಒದಗಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲ: ರೇವಣ್ಣ ಕಿಡಿ

Published On :

ಕ.ಪ್ರ.ವಾರ್ತೆ, ಹೊಳೆನರಸೀಪುರ, ಏ 15
ರಾಜ್ಯದ ಜನತೆಗೆ ಕಾವೇರಿ ನೀರಿನ ಹಂಚಿಕೆಯಲ್ಲಿ ನ್ಯಾಯ ಒದಗಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.
ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದ ಜನತೆ ಈ ಎರಡೂ ಸರ್ಕಾರ ತಿರಸ್ಕರಿಸಿ ಜೆಡಿಎಸ್ ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
 ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಮತದಾರರು ಜೆಡಿಎಸ್ ಬೆಂಬಲಿಸಿದಲ್ಲಿ, ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳಿಗೆ ತಮ್ಮ ಪಕ್ಷ ಮೊದಲ ಆದ್ಯತೆ ನೀಡುವ ಜೊತೆಗೆ ಬಡಜನರ ರೈತರ ಪರವಾಗಿ ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ಥಿರ ಸರ್ಕಾರ ನೀಡುವುದಾಗಿ ತಿಳಿಸಿದರು.
ತ  ಾವು ಮಂತ್ರಿಯಾಗಿದ್ದ ಅವಧಿಯಲ್ಲಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮನಗಂಡಿರುವ ಜನರು ಜೆಡಿಎಸ್ ಬೆಂಬಲಿಸಲಿರುವುದಾಗಿ ಭವಿಷ್ಯ ನುಡಿದರು.
 ಜಿಲ್ಲೆಯ ಬೇಲೂರು ಹಾಗೂ ಹಾಸನ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿ ಆಯ್ಕೆಯ ಕುರಿತಂತೆ ಉಂಟಾಗಿರುವ ಗೊಂದಲದ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಚರ್ಚಿಸಿ ಇಂದು ರಾತ್ರಿಯ ವೇಳೆಗೆ ಅಭ್ಯರ್ಥಿ ಪಟ್ಟಿಯನ್ನು ಅಂತಿಮಗೊಳಿಸಲಿರುವುದಾಗಿ ತಿಳಿಸಿದರು.
ಆದರ್ಶ ಕ್ಷೇತ್ರ - ಅನುಪಮ ಭರವಸೆ:  ನಂತರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಅನುಪಮ ಮಾತನಾಡಿ ತಾಲೂಕಿನ ಜನತೆಗೆ ಅಭಿವೃದ್ಧಿ ಹೆಸರಿನ ಅನಾವಶ್ಯಕ ಕಾಮಗಾರಿಗಳ ಸೃಷ್ಟಿಗಿಂತಲೂ ಶಾಂತಿ ಮತ್ತು ನೆಮ್ಮದಿಯ ಜೀವನ ಕಲ್ಪಿಸಬೇಕಾದ ಅಗತ್ಯತೆಯನ್ನು ಮನಗಂಡಿರುವ ತಾನು, ಈ ಬಾರಿ ಕ್ಷೇತ್ರದ ಜನತೆ ತಮಗೆ ಮತ ನೀಡಿ ಜಯ ತಂದುಕೊಟ್ಟಲ್ಲಿ ಆದರ್ಶ, ಶಾಂತಿ ಕ್ಷೇತ್ರವನ್ನಾಗಿ ರೂಪಿಸುವುದಾಗಿ ತಿಳಿಸಿದರು.
 ಈ ಹೋಬಳಿಗಳಲ್ಲಿನ ಜನರನ್ನು ತಮ್ಮತ್ತ ಸೆಳೆಯುವಲ್ಲಿ ಎಲ್ಲೋ ಅಲ್ಪ ವಿಫಲತೆಯಿ ಉಂಟಾಗಿರಬಹುದು ಆದರೆ ಈ ಬಾರಿ ಇಡೀ ಕ್ಷೇತ್ರದ ಎಲ್ಲ ಮತದಾರರ ಮನೆ ಬಾಗಿಲಿಗೆ ತೆರಳಿ ಮತಯಾಚಿಸಲಿದ್ದು, ಕ್ಷೇತ್ರದ ಜನರು ತಮ್ಮನ್ನು ಬೆಂಬಲಿಸಲಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.