ಹಾಸನ

ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ನಿಯೋಜನೆ

Published On :

ಕನ್ನಡಪ್ರಭ ವಾರ್ತೆ, ಹಾಸನ, ಏ.15
ಜಿಲ್ಲೆಯ ಎಲ್ಲ 7 ವಿಧಾನಸಭಾ ಕ್ಷೇತ್ರಗಳಿಗೂ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು  ನಿಯೋಜನೆ ಮಾಡಿ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬೇಕಾದ ಸ್ಥಳಗಳ ಮಾಹಿತಿ  ಜಿಲ್ಲಾಧಿಕಾರಿ ನೀಡಿದ್ದಾರೆ.
ಶ್ರವಣಬೆಳಗೊಳ: ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ. ಜಿ. ಸುರೇಶ್, ವಿಶೇಷ ಭೂ ಸ್ವಾಧೀನಾಧಿಕಾರಿ ಹೆ.ಜ.ಯೋ(2) ಹಾಸನ ಮೊ 9342521148 ಹಾಗೂ ಸ್ಥಿರ ದೂರವಾಣಿ  08176252235 ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಪಿ.ಜಿ. ನಟರಾಜ್, ತಹಸೀಲ್ದಾರ್, ಚನ್ನರಾಯಪಟ್ಟಣ ತಾ, ಮೊ.944822104 ಇವರನ್ನು ನೇಮಿಸಿದ್ದು ನಾಮಪತ್ರವನ್ನು ತಾಲೂಕು ಕಚೇರಿ, ಮಿನಿ ವಿಧಾನಸೌಧ ಚನ್ನರಾಯ ಪಟ್ಟಣ ಇಲ್ಲಿ ಸಲ್ಲಿಸಬಹುದಾಗಿದೆ.
ಅರಸೀಕೆರೆ  ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವರಾಜ್, 9448147940 ದೂರವಾಣಿ  08174232611, ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಅರಸೀಕೆರೆ ತಾಲೂಕು ತಹಸೀಲ್ದಾರ್ ಕೇಶವಮೂರ್ತಿ ಮೊ 9844094497 ಇವರನ್ನು ನೇಮಿಸಿದ್ದು ನಾಮಪತ್ರವನ್ನು ತಾಲೂಕು ಕಚೇರಿ ಮಿನಿ ವಿಧಾನಸೌಧ ಅರಸೀಕೆರೆ ಇಲ್ಲಿ ಸಲ್ಲಿಸಬಹುದಾಗಿದೆ.
ಬೇಲೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಇಲಿಯಾಸ್ ಉಲ್ಲಾ ಷರೀಫ್, ಉಪ ನೊಂದಣಾಧಿಕಾರಿ, ಹಾಸನ 9448207179, ದೂರವಾಣಿ 08177222104, ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ರವಿಚಂದ್ರ ನಾಯಕ್ ತಹಸೀಲ್ದಾರ್, ಬೇಲೂರು ತಾ. ಮೊ.9916821123 ಇವರನ್ನು ನೇಮಿಸಿದ್ದು, ನಾಮಪತ್ರವನ್ನು ತಾಲೂಕು ಕಚೇರಿ ಮಿನಿ ವಿಧಾನಸೌಧ ಬೇಲೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹಾಸನ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಚ್.ಸಿ. ಚಿದಾನಂದ್  9900080567  ದೂರವಾಣಿ 08172267218 ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಹಾಸನ ತಹಸೀಲ್ದಾರ್ ಮಂಜುನಾಥ್ ಮೊ 9449343588 ಇವರನ್ನು ನೇಮಿಸಿದ್ದು, ನಾಮಪತ್ರವನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೆ.ಆರ್. ಪುರಂ. 9ನೇ ಕ್ರಾಸ್ ಹಾಸನ ಇವರಿಗೆ ಸಲ್ಲಿಸಬಹುದಾಗಿದೆ.
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಹಾಸನ ಉಪವಿಭಾಗಧಿಕಾರಿ ಕೆ.ಎಚ್. ಜಗದೀಶ್ 8050545425 ದೂರವಾಣಿ  08175 273252 ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಹೊಳೆನರಸೀಪುರ ತಹಸೀಲ್ದಾರ್ ಮಂಜುಳ ಮೊ 9900701342  ಇವರನ್ನು ನೇಮಿಸಿದ್ದು, ನಾಮಪತ್ರ ವನ್ನು ತಾಲೂಕು ಕಚೇರಿ ಮಿನಿ ವಿಧಾನಸೌಧ ಹೊಳೆನರಸೀಪುರ ಇವರಿಗೆ ಸಲ್ಲಿಸುವಂತೆ ಕೋರಲಾಗಿದೆ.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿ ಜಿ. ಜಗದೀಶ್  9945999965 ದೂರವಾಣಿ 08175220246 ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಅರಕಲಗೂಡು ತಹಸೀಲ್ದಾರ್ ಕೆ.ಪಿ. ಈಶ್ವರಪ್ಪ, ಮೊ.9964292392 ಇವರನ್ನು ನೇಮಿಸಿದ್ದು, ನಾಮಪತ್ರವನ್ನು ತಾಲೂಕು ಕಚೇರಿ ಮಿನಿ ವಿಧಾನಸೌಧ ಅರಕಲಗೂಡು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಸಕಲೇಶಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಸಕಲೇಶಪುರ ಉಪವಿಭಾಗಾಧಿಕಾರಿ ಶ್ರೀ ವಿದ್ಯಾ, 8197419245, ದೂರವಾಣಿ  08173 244004 ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಸಕಲೇಶಪುರ ತಹಸೀಲ್ದಾರ್ ಬಾಬಿ ದೇವಾಡಿಗ ಮೊ 9901790670 ಅವರನ್ನು ನೇಮಿಸಿದ್ದು, ನಾಮಪತ್ರವನ್ನು ಸಕಲೇಶಪುರ ಉಪ ವಿಭಾಗಾಧಿಕಾರಿ ಕಚೇರಿ ಸಕಲೇಶಪುರ  ಇಲ್ಲಿಗೆ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.