ಹಾಸನ

ಕೈ ಕೊಟ್ಟ ಪ್ರಿಯತಮೆ: ಪ್ರಿಯಕರ ಆತ್ಮಹತ್ಯೆ

Published On :

ಹಾಸನ: ಪ್ರಿಯತಮೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ತಾಲೂಕಿನ ಕಸಬಾ ಹೋಬಳಿಯ ನಿಡುಡಿ ಗ್ರಾಮದ ಚಂದ್ರೇಗೌಡ ಎಂಬುವರ ಪುತ್ರ ಪ್ರಶಾಂತ್ (28) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಪ್ರಶಾಂತ್ ತಾಲೂಕಿನ ಕಬಳಿ ಗ್ರಾಮದ ಲಕ್ಷ್ಮಿ ಎಂಬಾಕೆಯನ್ನು 8 ವರ್ಷಗಳಿಂದ ಪ್ರೀತಿಸುತ್ತಿದ್ದ. ಈಕೆಗೆ ಬೇರೊಬ್ಬ ಯುವಕನೊಂದಿಗೆ ಸಂಬಂಧ ಇದೆ ಎಂದು ಅರಿತು ಪ್ರಶಾಂತ್ ಕೆಲವು ದಿನಗಳಿಂದ ಆಕೆಯಿಂದ ದೂರವಿದ್ದ. ಆದರೆ ಆಕೆಯೇ ಮತ್ತೆ ಪ್ರಶಾಂತ್‌ನನ್ನು ಸಂಪರ್ಕಿಸಿ ಮಾತನಾಡುತ್ತಿದ್ದಳು. ಇದರಿಂದ ಮನನೊಂದು ಪ್ರಶಾಂತ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.