ಹಾಸನ

ಟಿಕೆಟ್ ತಪ್ಪಲು ಶಿವರಾಂ ಕಾರಣ: ಸಣ್ಣಸ್ವಾಮಿ ಆರೋಪ

Published On :

ಹಾಸನ: ಸಕಲೇಶಪುರ-ಆಲೂರು-ಕಟ್ಟಾಯ ಕ್ಷೇತ್ರದಿಂದ ನನಗೆ ಟಿಕೆಟ್ ತಪ್ಪಲು ಜಿಲ್ಲಾಧ್ಯಕ್ಷ ಬಿ. ಶಿವರಾಂ ಹಾಗೂ ಕೆಲ ನಾಯಕರ ದ್ವೇಷ ರಾಜಕಾರಣವೇ ಕಾರಣ ಎಂದು ಕಾಂಗ್ರೆಸ್ ರಾಜ್ಯ ಸಂಚಾಲಕ ಡಿ.ಸಿ.ಸಣ್ಣಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದೆ. ವಿದ್ಯಾರ್ಥಿ ಜೀವನದಿಂದಲೂ ಚಳವಳಿ ಮೈಗೂಡಿಸಿಕೊಂಡು, ಸುಮಾರು 25 ವರ್ಷಗಳಿಂದ ಸಕಲೇಶಪುರ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹಾಗೂ ಸಕಲೇಶಪುರ-ಆಲೂರುನ್ನು  ಮಾದರಿ ಪಟ್ಟಣವನ್ನಾಗಿಸಲು ಶ್ರಮಿಸಿದ್ದೇನೆ. ಪಕ್ಷದ ಜಿಲ್ಲಾಧ್ಯಕ್ಷ ಬಿ.ಶಿವರಾಂ ಹಾಗೂ ಜಿಲ್ಲೆ ಕೆಲ ನಾಯಕರ ವ್ಯವಸ್ಥಿತ ಪಿತೂರಿಯಿಂದ ಈ ಭಾರಿ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದೆ ಎಂದು ದೂರಿದರು. ಹಿಂದೆ ಎಚ್.ಬಿ.ಯಜಮಾನಗೌಡ, ಬಿ.ಆರ್.ಗುರುದೇವ್, ದಿ. ಮಾಜಿ ಸಚಿವ ಶ್ರೀಕಂಠಯ್ಯ ಕಾಂಗ್ರೆಸ್ ಬಿಟ್ಟರೂ ನಾನು ಪಕ್ಷ ಬಿಡಲಿಲ್ಲ. ಜಿಲ್ಲಾ ಪರಿಷತ್ತಿನಲ್ಲಿದ್ದಾಗ ಕಾಂಗ್ರೆಸ್‌ನ ಕೆಲವು ಮುಖಂಡರು ಅಧಿಕಾರ ಹಾಗೂ ಹಣಕ್ಕಾಗಿ ಪಕ್ಷವನ್ನು ತೊರೆದರು. ಆಗಲೂ ನಾನು ಪಕ್ಷ ಸಂಘಟನೆಗಾಗಿ ಶ್ರಮಿಸಿದೆ ಎಂದು ತಿಳಿಸಿದರು. ನನಗೆ ಟಿಕೆಟ್ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರು ವರಿಷ್ಠರ ಮೇಲೆ ಒತ್ತಡ ತಂದಿದ್ದರು. ಆದರೂ ವರಿಷ್ಠರು ಡಿ.ಮಲ್ಲೇಶ್ ಅವರಿಗೆ ಟಿಕೆಟ್ ನೀಡಿದ್ದಾರೆ. ವರಿಷ್ಠರ ತೀರ್ಮಾನಕ್ಕೆ ಬದ್ದನಾಗಿದ್ದು, ಪಕ್ಷದ ಅಭ್ಯರ್ಥಿಯನ್ನು ಪಕ್ಷದ ಸಂಘಟನೆ ಕಾರಣದಿಂದಾಗಿ ಬೆಂಬಲಿಸುವುದಾಗಿ ಹೇಳಿದ ಅವರು, ಯಾವುದೇ ಕಾರಣಕ್ಕೂ ಬಂಡಾಯವಾಗಿ ಸ್ಪರ್ಧಿಸುವ ಇಚ್ಛೆ ಹೊಂದಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.