ಹಾಸನ

ಯಾರ್ಯಾರಿಂದ ಎಲ್ಲಿ ನಾಮಪತ್ರ ಸಲ್ಲಿಕೆ

Published On :

ಹಾಸನ: ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ನಾಮಪತ್ರ ಸಲ್ಲಿಕೆ ವಿವರ ಇಂತಿದೆ. ಹಾಸನ ವಿಧಾನಸಭಾ ಕ್ಷೇತ್ರದಿಂದ ಮಂಗಳವಾರ ಭಾರತೀಯ ರಿಪಬ್ಲಿಕನ್ ಪಕ್ಷದಿಂದ ಏಜಾಸ್ ಅಹಮದ್ ಫಾರೂಕಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಎಸ್.ಎ.ಇಬ್ರಾಹಿಂ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಎಂ.ಬಿ.ಗುರುಪ್ರಸಾದ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಚಿದಾನಂದ್  ತಿಳಿಸಿದ್ದಾರೆ.
ಅರಸೀಕೆರೆ ಕ್ಷೇತ್ರದಿಂದ ವೆಂಕಟೇಶ್ ರವಿ ಪಕ್ಷೇತರರಾಗಿನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಶಿವರಾಜು ತಿಳಿಸಿದ್ದಾರೆ. ಹೊಳೆನರಸೀಪುರ ಕ್ಷೇತ್ರದಿಂದ ಮಾಳಿಗೇಗೌಡ ಪಕ್ಷೇತರರಾಗಿ ಮತ್ತು ಶೋಭ ಅವರು ಬಡವರ ಶ್ರಮಿಕರ ರೈತರ ಕಾಂಗ್ರೆಸ್ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಎಚ್.ಜಗದೀಶ್ ಮಾಹಿತಿ ನೀಡಿದ್ದಾರೆ. ಅರಕಲಗೂಡು ಕ್ಷೇತ್ರದಿಂದ ಸಮಾಜವಾದಿ ಜನತಾ ಪಕ್ಷದಿಂದ ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಬೇಲೂರು ಕ್ಷೇತ್ರದ ಕೆಜೆಪಿ ಅಭ್ಯರ್ಥಿಯಾಗಿ ಎಚ್.ಎಂ.ವಿಶ್ವನಾಥ್, ಬಿಎಸ್‌ಆರ್ ಕಾಂಗ್ರೆಸ್‌ನಿಂದ ಭುಜೇಂದ್ರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಇಲಿಯಾಸ್ ಉಲ್ಲಾ ಷರೀಫ್ ತಿಳಿಸಿದ್ದಾರೆ. ಶ್ರವಣಬೆಳಗೊಳ ಕ್ಷೇತ್ರದಿಂದ ಕೋವಿ ಬಾಬಣ್ಣ ಕರ್ನಾಟಕ ರೈತ ರಕ್ಷಣಾ ವೇದಿಕೆ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಡಾ.ಸುರೇಶ್ ತಿಳಿಸಿದ್ದಾರೆ. ಸಕಲೇಶಪುರ ತಾಲೂಕಿನಲ್ಲಿ ಹಿಂದುಸ್ಥಾನ್ ನಿರ್ಮಲದಳ ಪಕ್ಷದಿಂದ ಪುಟ್ಟಯ್ಯ ಹಾಗೂ ಪಕ್ಷೇತರರಾಗಿ ಗಂಗಾಧರ, ಸಂಜಯಬಾಬು, ವೀರೇಶಬಾಬು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಶ್ರೀವಿದ್ಯಾ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.