ಹಾಸನ

'ಶಾಸಕ ರುದ್ರೇಶಗೌಡರ ಸಾಧನೆ ಶೂನ್ಯ'

Published On :

ಕ,ಪ್ರ. ವಾರ್ತೆ ಟಿ ಬೇಲೂರು ಟಿ  ಏ.16
ತಾಲೂಕಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಿದ ಅನುದಾನವನ್ನು ತಮ್ಮ ಸಾಧನೆ ಎಂದು ಶಾಸಕ ವೈ.ಎನ್. ರುದ್ರೇಶ್‌ಗೌಡ ಹೇಳಿಕೊಳ್ಳುತ್ತಿದ್ದು, ಕಳೆದ 5 ವರ್ಷದಲ್ಲಿ ಅವರ ಸಾಧನೆ ಶೂನ್ಯ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಬೆಣ್ಣೂರು ರೇಣುಕುಮಾರ್ ಅವರು ಹೇಳಿದರು.
ಇ.ಎಚ್.ಲಕ್ಷ್ಮಣ್ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ   ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ 50 ವರ್ಷದಿಂದ ಕಾಂಗ್ರೆಸ್, ಜೆಡಿಎಸ್ ಸರ್ಕಾರಗಳು ಬೇಲೂರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೆ ವೃಥಾ ಕಾಲತಳ್ಳಿದ್ದಾರೆ. ಹಳೆಬೀಡು ಮತ್ತು ಮಾದೀಹಳ್ಳಿ ಹೋಬಳಿಗೆ ಏತ ನೀರಾವರಿ ಮೂಲಕ ಸುಮಾರು 36 ಕೆರೆಗಳಿಗೆ ನೀರು ಒದಗಿಸುವ ಕಾಮಗಾರಿ ಕೆಲಸಕ್ಕೆ ಚಾಲನೆ ನೀಡಿದ್ದು ಬಿಜೆಪಿ ಸರ್ಕಾರ. ಅದರೆ ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶಗೌಡ ಇದು ನಮ್ಮ ಸಾಧನೆ ಎಂದು ಹೇಳಿಕೊಳ್ಳುವಲ್ಲಿ ಯಾವ ಅರ್ಥವಿಲ್ಲ ಎಂದು ಟೀಕಿಸಿದರು.
ಈ ಬಾರಿ ಬಿಜೆಪಿಗೆ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಿಜೆಪಿ ಅಭ್ಯರ್ಥಿ ಇ.ಎಚ್.ಲಕ್ಷ್ಮಣ್ ಸರಳ ಸಜ್ಜನಿಕೆಯ ವ್ಯಕ್ತಿ. ಅವರು ಜಿಪಂ ಸದಸ್ಯರಾಗಿ ಮತ್ತು ಬೇಲೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದು, ಈ ಚುನಾವಣೆಯಲ್ಲಿ ಖಂಡಿತ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಇ.ಎಚ್.ಲಕ್ಷ್ಮಣ್ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿಗೆ ಉತ್ತಮ ರೀತಿಯಲ್ಲಿ ಬೆಂಬಲ ವ್ಯಕ್ತವಾಗಿದೆ ಎಂದರು. ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ತಿಳಿಸಿದ ಅವರು ಜಾವಗಲ್ ಸೇರಿದಂತೆ 4  ಹೋಬಳಿ ಕಾರ್ಯಕರ್ತರ ಬೆಂಬಲ ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.
ಜಿಪಂ ಸದಸ್ಯ ಅಮಿತ್‌ಶೆಟ್ಟಿ, ತಾಪಂ ಸದಸ್ಯ ಪರ್ವತಯ್ಯ, ಶೇಖರಯ್ಯ, ಮುಖಂಡ ಎಚ್.ಎಲ್.ಮೋಹನ್, ಅಭಿಗೌಡ, ಜೆ.ಕೆ.ಕುಮಾರ್, ಸಂತೋಷ್, ಪುಷ್ಪಲಕ್ಷ್ಮಣ್, ಶೃತಿಲಕ್ಷ್ಮಣ್,  ಜಿಲ್ಲಾ ಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಶೇಖರ್, ಜಯಲಿಂಗಪ್ಪ, ತಂಡೆಕೆರೆ ರಮೇಶ್, ಗಂಗಾಧರ್, ಹೊಸಳ್ಳಿ ಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.