ಸಕಲೇಶಪುರ: 20 ನಾಮಪತ್ರ
ಕನ್ನಡಪ್ರಭ ವಾರ್ತೆ ಸಕಲೇಶಪುರ ಏ.17
ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಬುಧವಾರ 8 ನಾಮಪತ್ರಗಳು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಲ್ಲಿಕೆಯಾದವು. ಈವರೆಗೆ 20 ನಾಮಪತ್ರಗಳನ್ನು ಸಲ್ಲಿಸಲಾಗಿದೆ
ಬಿಎಸ್ಆರ್ ಕಾಂಗ್ರೆಸ್ನಿಂದ ಗಣೇಶ್, ಬಿಎಸ್ಪಿಯಿಂದ ಕುಮಾರ್, ಪಕ್ಷೇತರರಾಗಿ ಡಿ.ಕೆ ಕುಮಾರಸ್ವಾಮಿ, ದೊಡ್ಡೀರಯ್ಯ, ಮೀನಾಕ್ಷಿ, ಆರ್. ದೇವರಾಜ್, ಜೆ.ಸಿ ರವಿ ಹಾಗೂ ಎಚ್.ಸಿ ಸುಬ್ರಮಣ್ಯ ನಾಮಪತ್ರ ಸಲ್ಲಿಸಿದರು.
ಸೋಮವಾರ ನಾಮಪತ್ರ ಸಲ್ಲಿಸಿದ್ದ ಕೆಜೆಪಿ ಅಭ್ಯರ್ಥಿ ಬೆಳಗೋಡು ಉಮೇಶ್ ಹಾಗೂ ಮಂಗಳವಾರ ನಾಮಪತ್ರ ಸಲ್ಲಿಸಿದ್ದ ವೀರೇಶ್ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಒಟ್ಟಾರೆ ಕ್ಷೇತ್ರದ ವಿಧಾನ ಸಭಾ ಚುನಾವಣೆಗೆ 20 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಇದರಲ್ಲಿ 12 ಪಕ್ಷೇತರರು ಹಾಗೂ 8 ಅಭ್ಯರ್ಥಿಗಳು ನಾನಾ ಪಕ್ಷಗಳಿಂದ ನಾಮಪತ್ರ ಸಲ್ಲಿಸಿದ್ದಾರೆ.
ಬಂಡಾಯ ಕಾಂಗ್ರೆಸ್ಸಿಗರೆಂದು ಗುರುತಿಸಿಕೊಂಡಿರುವ ದೊಡ್ಡೀರಯ್ಯ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

