ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಅಚ್ಚರಿ ಫಲಿತಾಂಶ: ರಾಘವನ್ ವಿಶ್ವಾಸ
ಹಾಸನ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಅಚ್ಚರಿ ಫಲಿತಾಂಶ ಬರಲಿದೆ ಎಂದು ಕಾಂಗ್ರೆಸ್ ಸಂಸದ ಹಾಗೂ ಚುನಾವಣಾ ವೀಕ್ಷಕ ರಾಘವನ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಉತ್ತಮ ಫಲಿತಾಂಶ ಬರಲಿದೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಆಡಳಿತದಿಂದ ಬೇಸತ್ತಿರುವ ಮತದಾರರು ಕಾಂಗ್ರೆಸ್ಗೆ ಒಲವು ತೋರುತ್ತಿರುವುದರಿಂದ ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನ ಲಭಿಸಲಿದೆ ಎಂದು ಹೇಳಿದರು. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರವನ್ನು ಪರಿಶೀಲಿಸಿದ್ದು, ಕೆಲ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದೆ ಬಂಡಾಯದ ಎದ್ದಿರುವವರನ್ನು ಪಕ್ಷಕ್ಕೆ ವಾಪಸ್ ಬರಲು ತಿಳಿಸಲಾಗಿದೆ. ಕಾಂಗ್ರೆಸ್ನಲ್ಲಿ ಒಗ್ಗಟ್ಟು ಮೂಡಿದ್ದು, ಬಿಕ್ಕಟ್ಟುಗಳನ್ನು ಶಮನ ಮಾಡಲಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷ ನಾರಾಯಣಗೌಡ, ಎಚ್.ಪಿ. ಮೋಹನ್, ಅನುಪಮ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

