'ಕಾಂಗ್ರೆಸ್ನಲ್ಲಿ ಸಾಮಾಜಿಕ ನ್ಯಾಯ ಇಲ್ಲ'
ಅರಕಲಗೂಡು: ಕಾಂಗ್ರೆಸ್ನಲ್ಲಿ ಸಾಮಾಜಿಕ ನ್ಯಾಯ ಲಭ್ಯವಿಲ್ಲ ಎಂಬುದಾಗಿ ಕೆಜಿಪಿ ಮುಖಂಡ ಹೆಚ್.ಎಂ.ರಂಗೇಗೌಡ ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ ನಿರೀಕ್ಷಿಸಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಅಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಣ್ಣೇಚಾಕನಹಳ್ಳಿ ಎಸ್. ಪುಟ್ಟಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಒದಗಿಸದ ಕಾರಣ ಕಾಂಗ್ರೆಸ್ ಟಿಕೆಟ್ ತಪ್ಪಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕೆಜೆಪಿ ಪಕ್ಷದ ಟಿಕೆಟ್ ಪಡೆದು ಸಾಮಾಜಿಕ ನ್ಯಾಯದ ಪರ ಧ್ವನಿ ಎತ್ತಿ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಧುಮುಕಿರುವ ಕೆಜೆಪಿ ಪಕ್ಷದ ಅಭ್ಯರ್ಥಿ ಎಸ್. ಪುಟ್ಟಸ್ವಾಮಿ ಅವರಿಗೆ ಕ್ಷೇತ್ರದ ಮತದಾರರ ಬೆಂಬಲ ವ್ಯಕ್ತವಾಗಿದೆ ಎಂದು ನುಡಿದರು.
ತಾಲೂಕಿನ ರಾಮನಾಥಪುರದ ಹೋಬಳಿ ರಾಮನಕೊಪ್ಪಲು ಗ್ರಾಮದಲ್ಲಿ ಕೆಜೆಪಿ ಕಾರ್ಯಕರ್ತರು ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಗಿನೆಲೆ ಕನಕ ಗುರು ಪೀಠದ ಅಭಿವೃದ್ಧಿಗೆ ಅನುದಾನ ನೀಡಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಾಧನೆಯನ್ನು ಈ ಹಿಂದೆ ಆಡಳಿತ ನಡೆಸಿದ ಯಾವ ಮುಖ್ಯಮಂತ್ರಿಗಳು ಸಹ ಕೈಗೊಳ್ಳಲಿಲ್ಲ ಎಂದರು.
ರಾಮನಾಥಪುರ ಗ್ರಾಪಂ ಸದಸ್ಯ ಹಿರಣ್ಣಯ್ಯ ಮಾತನಾಡಿ, ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಶ್ರಮಿಸಿದರೆ ಪಕ್ಷದ ಅಭ್ಯರ್ಥಿ ಗೆಲವು ಸುಲಭ ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅರ್.ಎಸ್. ಚಿಕ್ಕೇಗೌಡ, ರಾಮನಕೊಪ್ಪಲು ಗಿಡ್ಡೇಗೌಡ, ನಂಜುಂಡ, ಬಸವರಾಜು, ದೇವೇಗೌಡ, ಮಂಜೇಗೌಡ, ಜಯರಾಮ್, ಬಾಲಕೃಷ್ಣ, ಅಭ್ಯರ್ಥಿ ಪುಟ್ಟೇಗೌಡ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

