ಕಾವೇರಿ ನೋಡಿ ಕಣ್ಣೀರು ಬರುತ್ತಿದೆ: ದೇವೇಗೌಡ
ಕ.ಪ್ರ. ವಾರ್ತೆ, ಬೇಲೂರು, ಏ.19
ಶ್ರೀರಾಮನವಮಿ ಪ್ರಯುಕ್ತ ಶುಕ್ರವಾರ ಚನ್ನಕೇಶವಸ್ವಾಮಿಯ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಭಾಷಣ ಆರಂಭಿಸುವ ಸಲುವಾಗಿ ಇಲ್ಲಿಗೆ ಬಂದಿರುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶುಕ್ರವಾರ ತಿಳಿಸಿದರು.
ಇಲ್ಲಿನ ವಿಶ್ವವಿಖ್ಯಾತ ಚನ್ನಕೇಶವಸ್ವಾಮಿ ದೇಗುಲಕ್ಕೆ ತೆರಳಿ ವಿಶೇಷ ಪ್ರಾರ್ಥನೆ, ಪೂಜೆ ನೆರವೇರಿಸಿದ ನಂತರ ವೀರಶೈವ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ತಾವು 10 ತಿಂಗಳು ಪ್ರಧಾನ ಮಂತ್ರಿಯಾಗಿ ನಂತರ ಆ ಸ್ಥಾನದಿಂದ ಕೆಳಗಿಳಿದಾಗಲೂ ಕಣ್ಣೀರು ಸುರಿಸಲಿಲ್ಲ. ಆದರೆ ಕಳೆದ 3 ತಿಂಗಳಿಂದ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ನೋಡಿ ಕಣ್ಣೀರು ಬರುತ್ತಿದೆ.
ಮುಂದಿನ ಯುವ ಪೀಳಿಗೆಗೆ ಕಾವೇರಿ, ಕೃಷ್ಣಾ ನೀರು ಉಳಿಯುತ್ತದೆಯೇ ಎಂಬುದು ಪ್ರಶ್ನೆಯಾಗಿ ಕಾಡುತ್ತಿದೆ. ರಾಜ್ಯದಲ್ಲಿ ಮತ್ತೆ ಎಚ್.ಡಿ. ಕುಮಾರಸ್ವಾಮಿ ಅಧಿಕಾರಕ್ಕೆ ಬರಬೇಕು ಎಂಬುದು ಎಲ್ಲರ ಆಸೆಯಾಗಿದ್ದು, ರೈತರ ಕಣ್ಣೀರು ಒರೆಸಲು ಜೆಡಿಎಸ್ನಿಂದ ಮಾತ್ರ ಸಾಧ್ಯ. ತಾವು ಮೇ 3ರವರೆಗೆ ವಿಶ್ರಾಂತಿ ಇಲ್ಲದೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. ಮೈಸೂರು ಕರ್ನಾಟಕ ಎಚ್.ಕೆ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಿಂಧ್ಯಾ ಹಾಗೂ ಉತ್ತರ ಕರ್ನಾಟಕದಲ್ಲಿ ತಾವು ಪ್ರಚಾರ ಕಾರ್ಯ ನಡೆಸುವುದಾಗಿ ತಿಳಿಸಿದರು. ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಸ್. ಲಿಂಗೇಶ್, ಜಿಪಂ ಮಾಜಿ ಅಧ್ಯಕ್ಷರಾದ ಚಂದ್ರೇಗೌಡ, ಜಿ.ಟಿ. ಇಂದಿರಾ, ಮಾಜಿ ಪುರಸಭಾಧ್ಯಕ್ಷ ಬಿ.ಸಿ. ಮಂಜುನಾಥ್, ತಜಮುಲ್ ಪಾಷ, ತಾಲೂಕು ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಜಿಪಂ ಸದಸ್ಯರಾದ ಹೇಮಾವತಿ ಮಂಜುನಾಥ್, ಇಂದಿರಾ ಧರ್ಮಪ್ಪ, ತಾಪಂ ಮಾಜಿ ಸದಸ್ಯ ಎಂ.ಎ.ನಾಗರಾಜ್, ಸಿ.ಎಸ್ ಪ್ರಕಾಶ್, ಗಣೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

