ದೇಶದ್ರೋಹಿಗಳ ಮಟ್ಟಕ್ಕೆ ಕಾಂಗ್ರೆಸ್ ಸ್ಪಂದಿಸಲಿ
ಕ.ಪ್ರ. ವಾರ್ತೆ ಅರಸೀಕೆರೆ ಏ.19
ರಾಜ್ಯ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ಬಗ್ಗೆ ಹಗುರವಾಗಿ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡುವ ಬದಲು ಸಮಾಜಘಾತಕ, ದೇಶದ್ರೋಹಿಗಳನ್ನು ರಾಜ್ಯದಲ್ಲಿ ಸಂಪೂರ್ಣ ಮಟ್ಟ ಹಾಕಲು ಪ್ರಾಮಾಣಿಕವಾಗಿ ಸ್ಪಂದಿಸಬೇಕೆಂದು ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಆಗ್ರಹಿಸಿದರು.
ಪಟ್ಟಣದ ಬಿ.ಎಚ್. ರಸ್ತೆಯಲ್ಲಿ ವಿಧಾನಸಭಾ ಚುನಾವಣೆ ಕಾರಣ ನೂತನವಾಗಿ ಆರಂಭಗೊಂಡ ಪಕ್ಷದ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು ಬೆಂಗಳೂರಿನ ಬಾಂಬ್ ಸ್ಫೋಟದ ಬಗ್ಗೆ ರಾಜ್ಯ ವಿರೋಧ ಪಕ್ಷದ ನಾಯಕರು ಮತ್ತು ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ ಹಾಗೂ ಸಂಸದರಾದ ಎಚ್.ವಿಶ್ವನಾಥ್ ಅತ್ಯಂತ ಬಾಲಿಶ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಟೀಕಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಬೇಕೇಂದು ಕನಸು ಕಾಣುತ್ತಿರುವ ವಿರೋಧ ಪಕ್ಷಗಳು ಅತಿ ಹೆಚ್ಚು ಹಣ ಮತ್ತು ಹೆಂಡವನ್ನು ಮತದಾರರಿಗೆ ನೀಡುವ ಅಮಿಷ ಒಡ್ಡುತ್ತಿದ್ದಾರೆ. ಈ ಅಮಿಷಕ್ಕೆ ಯಾರು ಒಳಗಾಗದೆ ಬಿಜೆಪಿ ಅಭ್ಯರ್ಥಿ ಡಿ.ಬಿ.ಗಂಗಾಧರ ಅವರನ್ನು ಬೆಂಬಲಿಸಿ ಕಾರ್ಯಕರ್ತರು ಈ ಚುನಾವಣೆಯನ್ನು ಸಮರ್ಥ ರೀತಿಯಲ್ಲಿ ನಡೆಸುವ ಮೂಲಕ ಪಕ್ಷಕ್ಕೆ ಗೆಲವು ತಂದುಕೊಡಬೇಕೆಂದು ಕಾರ್ಯಕರ್ತರಲ್ಲಿ ವಿನಂತಿಸಿದರು.
ಸಭೆಯಲ್ಲಿ ಅಭ್ಯರ್ಥಿ ಡಿ.ಬಿ.ಗಂಗಾಧರ ಮಾತನಾಡಿ, ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಯಲ್ಲಿ ಶ್ರಮಿಸಿದ್ದೇನೆ. ಕಾರ್ಯಕರ್ತರ ಪಡೆಯ ಶಕ್ತಿ ಹಾಗೂ ಕ್ಷೇತ್ರದ ಜನತೆ ಆಶೀರ್ವಾದ ತಮ್ಮ ಮೇಲಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಬಿಜೆಪಿ ಅಧ್ಯಕ್ಷ ಬಾಳೇಗೌಡ ವಹಿಸಿದ್ದರು.
ಸಭೆಯಲ್ಲಿ ನಗರಾಧ್ಯಕ್ಷ ಬೈರೇಶ್, ಜಿ.ಪಂ.ಸದಸ್ಯ ಕೃಷ್ಣನಾಯ್ಕ್, ತಾಲೂಕು ಪ್ರಧಾನ ಕಾರ್ಯದಶಿಂ ಹಾಗೂ ತಾ.ಪಂ ಸದಸ್ಯ ಬಿ.ಆರ್.ಜಯಣ್ಣ, ತಾ.ಪಂ ಸದಸ್ಯ ದಿನೇಶ್, ಎನ್.ಡಿ.ಪ್ರಸಾದ್, ಸಿ.ರಾಮಚಂದ್ರ, ರಾಮಕೃಷ್ಣಯ್ಯ, ಉಪಾಧ್ಯಕ್ಷ ಪ್ರಭಾಕರ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

