ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ: ರಿಜ್ವಾನ್
ಕನ್ನಡಪ್ರಭ ವಾರ್ತೆ ಹಾಸನ ಏ 20
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ ಎಂದು ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿಯೂ ಈ ಪಕ್ಷಗಳ ನಡುವೆ ಹೊಂದಾಣಿಕೆಯಾಗಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಹಿಂದಿನ ಚುನಾವಣೆಯಲ್ಲಿ ನೀಡಿದ್ದ ಪ್ರಣಾಳಿಕೆಯನ್ನೇ ಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ಕಳೆದ 5 ವರ್ಷಗಳಲ್ಲಿ ಬಿಜೆಪಿ ಸರ್ಕಾರ ನಡೆಸಿ ಭ್ರಷ್ಟಾಚಾರ ಮುಂದೆಂದೂ ಆಗಬಾರದು. ಈ ಭ್ರಷ್ಟಾಚಾರದ ತನಿಖೆ ಆಗಬೇಕು ಹಾಗೂ ಇದರಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ನಾಯಕರು ತಾವು ರೈತನ ಮಗ ಎಂದು ಮಾತನಾಡುವ ಈ ಜಿಲ್ಲೆಯಲ್ಲೇ ರೈತರು ಹೆಚ್ಚಿನದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಹಿತ ಕಾಯುವಂತಹ ಕಾರ್ಯ ಇವರ್ಯಾರೂ ಮಾಡಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಬೇಕಿದ್ದು, ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಮಹೇಶ್ ಅವರಿಗೆ ಮತದಾರರು ಮತ ನೀಡಿ ಕಾಂಗ್ರೆಸ್ ನ್ನು ಸಂಪೂರ್ಣ ಬೆಂಬಲಿಸಿ ಸುಭದ್ರ ಸರ್ಕಾರ ರಚಿಸಲು ಸಹಕರಿಸುವಂತೆ ಮನವಿ ಮಾಡಿದರು.
ರಾಜ್ಯದಲ್ಲಿ ಕನಿಷ್ಠ 130 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಪಡೆಯಲಿದೆ ಎಂದ ಅವರು, ಕಾಂಗ್ರೆಸ್ ಸ್ವಂತ ಶಕ್ತಿಯೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮ್ಯಾಥ್ಯೂಸ್, ಯುವ ಕಾಂಗ್ರೆಸ್ ಮುಖಂಡ ಪಾಜಲ್ ಪಾಶಾ, ದೀಪಕ್, ಶ್ರೀನಿವಾಸ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

