ಹಾಸನ

ಫಲಿತಾಂಶ ಪ್ರಕಟ

Published On :

ಹಾಸನ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06ರ ಕರಾಮುವಿ ವತಿಯಿಂದ 2012-13ನೇ ಸಾಲಿನ ಏಪ್ರಿಲ್ ಮೇನಲ್ಲಿ ನಡೆದ ಬಿ.ಎ. ಪರೀಕ್ಷಾ ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ಕರಾಮುವಿಯ ಅಂತರ್ಜಾಲ ಢಿಢಿಢಿ.್ಞಡ್ಟ್ಡಟಣಡ್ಟ್ಠಜ.ಜಜ್ಡ.್ಝಟಿ ಇದರಲ್ಲಿ ಫಲಿತಾಂಶ ಪಡೆಯಬಹುದು.  ಮರುಮೌಲ್ಯಮಾಪನಕ್ಕೆ 20 ದಿನದೊಳಗಾಗಿ ಕುಲಸಚಿವರು (ಪರೀಕ್ಷಾಂಗ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06 ವಿಳಾಸಕ್ಕೆ ಅರ್ಜಿ ಸಲ್ಲಿಸತಕ್ಕದ್ದು. ಮಾಹಿತಿಗಾಗಿ 08172-269244 ಸಂಪರ್ಕಿಸಬೇಕೆಂದು ಪ್ರಾದೇಶಿಕ ನಿರ್ದೇಶಕ ಪಿ. ಹರೀಶ್ ತಿಳಿಸಿದ್ದಾರೆ.
12ಕ್ಕೆ ಸಾಮಾನ್ಯ ಸಭೆ
ಹಾಸನ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಣ್ಣ ಅಧ್ಯಕ್ಷತೆಯಲ್ಲಿ ಆಗಸ್ಟ್ 12ರಂದು ಮಧ್ಯಾಹ್ನ 12-05 ಕ್ಕೆ  ಜಿಲ್ಲಾ ಪಂಚಾಯ್ತಿಯ ಹೊಯ್ಸಳ ಸಭಾಂಗಣದಲ್ಲಿ ಸಾಮಾನ್ಯ ಸಭೆ ಜರುಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯು.ಪಿ.ಸಿಂಗ್ ತಿಳಿಸಿದ್ದಾರೆ.
ಖಜಾನಾಧಿಕಾರಿ ಸೂಚನೆ
ಹಾಸನ: ನಗರದ ಉತ್ತರ ಬಡಾವಣೆ ನಿವಾಸಿ ಶ್ರೀನಿವಾಸಮೂರ್ತಿ ಎಂಬುವರು ತಮ್ಮ ತಂದೆಯ ಪಿಂಚಣಿಗೆ ಸಂಬಂಧಿಸಿದಂತೆ 2ನೇ ಅಡಿಷನಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ಸಿ ಹಾಸನ ಕೋರ್ಟ್ನಲ್ಲಿ ದಾವೆ ಹೂಡಿದ್ದು, ಅವರು ಈ ವಿಳಾಸದಲ್ಲಿ ವಾಸವಾಗಿಲ್ಲವೆಂದು ಕೋರ್ಟ್ ನೋಟಿಸ್ ವಾಪಸ್ ಬಂದಿದೆ ಎಂದು ಜಿಲ್ಲಾ ಸರ್ಕಾರಿ ವಕೀಲರು ತಿಳಿಸಿದ್ದಾರೆ. ತಮ್ಮ ವಿಳಾಸಕ್ಕೆ ಸಂಬಂಧಿಸಿದಂತೆ, ಪತ್ರ ವ್ಯವಹರಿಸಲು ಜಿಲ್ಲಾ ಖಜಾನೆ, ಇವರ ಕಚೇರಿಯನ್ನಾಗಲಿ ಸಂಪರ್ಕಿಸಬೇಕೆಂದು ಖಜಾನಾಧಿಕಾರಿ ತಿಳಿಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.