15ರ ನಂತರ ಆಧಾರ್ ಕಾರ್ಡ್ ನೋಂದಣಿ ಕೇಂದ್ರ ಪ್ರಾರಂಭ
ಕ.ಪ್ರ.ವಾರ್ತೆ ಜಾವಗಲ್ ಆ. 6
ಹೋಬಳಿಯಲ್ಲಿ ಆಗಸ್ಟ್ 15ರ ನಂತರ ಆಧಾರ್ ಕಾರ್ಡ್ ನೋಂದಣಿ ಕೇಂದ್ರ ಕೇಂದ್ರ ಪ್ರಾರಂಭಿಸುವುದಾಗಿ ಅರಸೀಕೆರೆ ತಾಲೂಕು ತಹಸೀಲ್ದಾರ್ ಕೇಶವಮೂರ್ತಿ ತಿಳಿಸಿದರು. ಜಾವಗಲ್ ನಾಡಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಿಂದ ಸಾರ್ವಜನಿಕರ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ ಎಂದರು. ಅರಸೀಕೆರೆ ತಾಲೂಕಿಗೆ ಬೆಳೆ ನಷ್ಟದ ಪರಿಹಾರ 6 ಕೋಟಿ 1 ಲಕ್ಷದ 29 ಸಾವಿರ ರು. ಬಿಡುಗಡೆಯಾಗಿದ್ದು, 63 ಸಾವಿರ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಪರಿಹಾರ ದೊರಕಲಿದೆ. ಈಗಾಗಲೇ 37 ಸಾವಿರ ರೈತರಿಗೆ 5 ಕೋಟಿ ರು. ಪರಿಹಾರ ಚೆಕ್ ವಿತರಿಸಲಾಗಿದೆ ಎಂದು ಹೇಳಿದರು. ಹೋಬಳಿಯಲ್ಲಿ ತೀವ್ರ ಮಳೆ ಅಭಾವ, ಬರಗಾಲದಿಂದ ಜಾನುವಾರುಗಳಿಗೆ ಮೇವಿನ ತೊಂದರೆ ಇರುವ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು. ಜಾನುವಾರುಗಳಿಗೆ ಮೇವಿನ ಅಭಾವ ಇದ್ದು ಗೋಶಾಲೆ ಪ್ರಾರಂಭಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು. ಉಪ ತಹಶೀಲ್ದಾರ್ ಅಶೋಕ್, ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ರವೀಶ್, ಗ್ರಾಪಂ ಮಾಜಿ ಸದಸ್ಯ ನರಸಿಂಹಸ್ವಾಮಿ, ಬಿಜೆಪಿ ಮುಖಂಡ ಚಂದ್ರಶೇಖರಪ್ಪ ಯೋಗೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

