ಅತಿವೃಷ್ಟಿ: ವರದಿ ಶೀಘ್ರ ಸಲ್ಲಿಕೆ
ಕ.ಪ್ರ.ವಾರ್ತೆ ಸಕಲೇಶಪುರ ಆ.7
ತಾಲೂಕಿನಲ್ಲಿ ಸೃಷ್ಟಿಯಾಗಿರುವ ಅತಿವೃಷ್ಟಿ ಅವಾಂತರದ ಸಚಿತ್ರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಡಿ.ಮಲ್ಲೇಶ್ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದ ವ್ಯಾಪಕ ಹಾನಿಯಾಗಿದ್ದು ಗ್ರಾಮಾಂತರ ಪ್ರದೇಶದ ಬಹುತೇಕ ಬತ್ತದ ಬೆಳೆ ಹಾಗೂ ಕಾಫಿ ತೋಟಗಳು ಹಾನಿಗೀಡಾಗಿದೆ. ಕಳೆದ 15 ದಿನಗಳಿಂದ ವಿದ್ಯುತ್ ಇಲ್ಲದೆ ಗ್ರಾಮೀಣ ಭಾಗದ ಜನತೆ ಕತ್ತಲಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವರಿ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದರು. ತಾಲೂಕು ಅಧ್ಯಕ್ಷ ಬಿ.ಎಸ್. ವಿದ್ಯಾಶಂಕರ್ ಮಾತನಾಡಿ, ತಾಲೂಕಿನಲ್ಲಿ ಸುಮಾರು 200 ಕೋಟಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯುವ ಮೂಲಕ ತಕ್ಷಣವೇ ತಾಲೂಕಿಗೆ 20 ಕೋಟಿ ಅತಿವೃಷ್ಟಿ ಪರಿಹಾರ ಧನ ಬಿಡುಗಡೆಗೆ ಒತ್ತಾಯ ಮಾಡಲಾಗುವುದು ಎಂದರು. ಪಕ್ಷದ ಮುಖಂಡರಾದ ದೇವಾಲಕೆರೆ ಲೋಕೇಶ್, ಗೊದ್ದು ಲೋಕೇಶ್, ಎಸ್ಸಿ.ಎಸ್ಟಿ ಘಟಕದ ತಾಲೂಕು ಅಧ್ಯಕ್ಷ ಬೈಕೆರೆ ದೇವರಾಜ್ ಇತರರು ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

