ಹಾಸನ

'ಉಪನ್ಯಾಸಕ ಗೋಪಾಲಕೃಷ್ಣ ದಾವೆ ಹಿಂಪಡೆದು ಕಾರ್ಯನಿರ್ವಹಿಸಲಿ'

Published On :

ಚನ್ನರಾಯಪಟ್ಟಣ: ಪಟ್ಟಣದ ನವೋದಯ ಪದವಿ ಪೂರ್ವ ಕಾಲೇಜಿನ ಅರೆಕಾಲಿಕ ಉಪನ್ಯಾಸಕರೊಬ್ಬರನ್ನು ವಜಾ ಮಾಡಿರುವ ಬಗ್ಗೆ ತಾಲೂಕು ಕಚೇರಿಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಅರೆಕಾಲಿಕ ಉಪನ್ಯಾಸಕರನ್ನು ಸೇವೆಯಿಂದ ವಜಾ ಮಾಡಿರುವ ಕ್ರಮವನ್ನು ಖಂಡಿಸಿ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಕಾಲೇಜು ಬಹಿಷ್ಕರಿಸಿರುವ ಹಿನ್ನೆಲೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಉಪನ್ಯಾಸಕ ಗೋಪಾಲಕೃಷ್ಣ ಅವರು ನ್ಯಾಯಾಲಯದಲ್ಲಿ ಸಲ್ಲಿಸಿರುವ ದಾವೆಯನ್ನು ವಾಪಸ್ ಪಡೆದು ಕಾರ್ಯನಿರ್ವಹಿಸಲಿ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಾಗಿರುವುದರಿಂದ ಉಪನ್ಯಾಸಕ ಗೋಪಾಲಕೃಷ್ಣ ಅವರು ನ್ಯಾಯಾಲಯಕ್ಕೆ ಹೋಗಿರುವುದು ತಪ್ಪಾಗಿದ್ದರೂ ದಾವೆ ವಾಪಸ್ ಪಡೆಯಲು ಒಪ್ಪಿಗೆ ಸೂಚಿಸಿದ್ದು, ವಿದ್ಯಾರ್ಥಿಗಳು ಅವರನ್ನೇ ಕರ್ತವ್ಯಕ್ಕೆ ಕರೆಯಬೇಕೆಂದು ಒತ್ತಾಯಿಸುತ್ತಿರುವ ಹಿನ್ನಲೆಯಲ್ಲಿ ದೂರು ವಾಪಸ್ ಪಡೆದ ನಂತರದಲ್ಲಿ ನೇಮಿಸಿಕೊಳ್ಳಿ ಎಂದು ತಿಳಿಸಿದರು.  
ವಿದ್ಯಾರ್ಥಿಗಳು ಇದಕ್ಕೆ ಸಮ್ಮತಿ ಸೂಚಿಸಿದರಾದರೂ ಆಡಳಿತ ಮಂಡಳಿ ಅಧ್ಯಕ್ಷ ಪಟೇಲ್ ಮಂಜುನಾಥ್ ಶಾಸಕರ ಹೇಳಿಕೆಗೆ ಒಪ್ಪಿಗೆ ನೀಡಿ ತಾವು ಆಡಳಿತ ಮಂಡಳಿ ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.
ಕಳೆದ ವರ್ಷವೂ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಒಬ್ಬ ಉಪನ್ಯಾಸಕರನ್ನು ತೆಗೆದು ಹಾಕಿದ್ದು, ಇದರ ಪರಿಣಾಮವಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದು, ಆಡಳಿತ ಮಂಡಳಿಗೆ ಯಾವುದೇ ಅನ್ಯಾಯವಾಗಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ತಹಸೀಲ್ದಾರ್ ನಟರಾಜು, ಗ್ರೇಡ್ ಬಿ ತಹಸೀಲ್ದಾರ್ ಸೋಮಶೇಖರ್, ನವೋದಯ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಶ್ರೀಕಂಠಯ್ಯ, ರಾಮಚಂದ್ರ, ಕಾರ್ಯದರ್ಶಿ ರವಿ ಹಾಗೂ ನಿರ್ದೇಶಕರುಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.