ವೋಟರ್ ಐಡಿಯಂತೆ ಆಧಾರ್ ಕೂಡ ಅಗತ್ಯ: ಶಾಸಕ ಬಾಲಕೃಷ್ಣ
ಕ.ಪ್ರ.ವಾರ್ತೆ ಚನ್ನರಾಯಪಟ್ಟಣ ಆ.7
ಚುನಾವಣಾ ಆಯೋಗದ ಗುರುತಿನ ಪತ್ರದಂತೆ ಆಧಾರ್ ಕಾರ್ಡ್ ಕೂಡ ಜನತೆಗೆ ಅಗತ್ಯವಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಪಟ್ಟಣದಲ್ಲಿ ಆಧಾರ್ ಕಾರ್ಡ್ ಕೇಂದ್ರ ಉದ್ಘಾಟಿಸಿ ಮಾತನಾಡಿ, ಸರ್ಕಾರದಿಂದ ಯಾವುದೇ ದಾಖಲೆಗಳನ್ನು ಪಡೆಯಲು ಹಾಗೂ ಉದ್ಯೋಗ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಅಗತ್ಯವಿದೆ. ಜನತೆ ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು. ತಾಲೂಕಿನಲ್ಲಿ ಹಿರೀಸಾವೆಯಲ್ಲಿ ಆಧಾರ್ ಕಾರ್ಡ್ ನೀಡಲು ಸೌಲಭ್ಯ ಕಲ್ಪಿಸಲಾಗಿತ್ತು. ಮುಂದಿನ ದಿನಗಳಲ್ಲಿ ಮೂರು ಹೋಬಳಿಗಳಲ್ಲಿ ಮೂರು ಗ್ರಾಮ ಪಂಚಾಯಿತಿಗಳಲ್ಲಿ ಕೇಂದ್ರಗಳನ್ನು ತೆರೆದು ಕಾರ್ಡ್ ನೀಡಲು ವಿವರ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ತಹಸೀಲ್ದಾರ್ ನಟರಾಜ್ ಮಾತನಾಡಿ, ಪಟ್ಟಣದಲ್ಲಿ ಪ್ರತಿ ದಿನ 250ಮಂದಿ ತಮ್ಮ ಸ್ವ ವಿವರವನ್ನು ನೀಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾನುವಾರ ಸರ್ಕಾರಿ ರಜೆಯಾಗಿರುವ ಹಿನ್ನಲೆಯಲ್ಲಿ ನೌಕರರು ಅಂದು ಕಾರ್ಡ್ಗೆ ವಿವರ ನೀಡುವ ಸೌಲಭ್ಯ ಕಲ್ಪಿಸಿ ಮಂಗಳವಾರದಂದು ರಜೆ ದಿನವಾಗಿರುತ್ತದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಭಾನುವಾರ ರಜೆ ದಿನವಾಗಿರುತ್ತದೆ ಎಂದು ತಿಳಿಸಿದರು. ಹಿರೀಸಾವೆ, ಶ್ರವಣಬೆಳಗೊಳ ಹಾಗೂ ನುಗ್ಗೇಹಳ್ಳಿ ಹೋಬಳಿಗಳನ್ನು ಪ್ರಥಮ ಹಂತದಲ್ಲಿ ಆಯ್ಕೆ ಮಾಡಿಕೊಂಡಿದ್ದು, 50 ಕಂಪ್ಯೂಟರ್ಗಳ ಮುಖೇನ ಜನತೆಯ ವಿವರ ಪಡೆಯಲಾಗುವುದು. ಮುಂದಿನ ಮೂರು ತಿಂಗಳಲ್ಲಿ ತಾಲೂಕಿನಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

