15ಕ್ಕೆ ಸ್ವಾತಂತ್ರ್ಯ ಹೋರಾಟಗಾರರ ಕಚೇರಿ ಉದ್ಘಾಟನಾ ಸಮಾರಂಭ
ಕ.ಪ್ರ.ವಾರ್ತೆ ಹಾಸನ ಆ. 8
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಒಂದೆಡೆ ಕುಳಿತು ಪರಸ್ಪರ ಚರ್ಚೆ ನಡೆಸಲು, ಕುಂದು ಕೊರತೆಗಳನ್ನು ಸಲ್ಲಿಸಲು ಅವಕಾಶವಾಗುವಂತೆ ನೂತನ ಕಚೇರಿ ಉದ್ಘಾಟನೆಯಾಗಲಿದೆ ಎಂದು ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಎಚ್.ಆರ್. ವೆಂಕಟಸುಬ್ಬು(ಕಸ್ತೂರಿ)ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಂತೆ ಅಂಚೆ ಕಚೇರಿ ಪಕ್ಕದಲ್ಲಿ ಒಂದು ಕೊಠಡಿಯನ್ನು ಜಿಲ್ಲಾಡಳಿತ ನೀಡಿದ್ದು, ಅದನ್ನು ಆಗಸ್ಟ್ 15ರಂದು ಜಿಲ್ಲಾ ಉಸ್ತವಾರಿ ಸಚಿವರು ಉದ್ಘಾಟಿಸುವರು. ಆಗಸ್ಟ್ 15ರಂದು ಬೆಳಗ್ಗೆ 7.30ಕ್ಕೆ ಈ ಕಚೇರಿ ಆವರಣದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಆರ್.ವೆಂಕಟಸುಬ್ಬು(ಕಸ್ತೂರಿ) ಇವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆ. 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಸ್ವಾತಂತ್ರ್ಯ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಪ್ರಧಾನ ಕಾರ್ಯಕ್ರಮಕ್ಕೆ ವಾಹನದ ಮೂಲಕ ಕರೆದೊಯ್ಯಲಾಗುವುದು. ಇದಕ್ಕಾಗಿ ಹಾಸನ ತಾಲೂಕು ತಹಸೀಲ್ದಾರರು ವಿಶೇಷ ವಾಹನ ವ್ಯವಸ್ಥೆಯನ್ನು ಮಾಡಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲೂ ಸ್ವಾತಂತ್ರ್ಯ ಹೋರಾಟಗಾರರು ಕೂರಲು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದ ನಂತರ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನೂ ಜಿಲ್ಲಾಧಿಕಾರಿ ಕಚೇರಿ ಬಳಿ ನೂತನವಾಗಿ ಉದ್ಘಾಟನೆಗೊಳ್ಳಲಿರುವ ಸ್ವಾತಂತ್ರ್ಯ ಹೋರಾಟಗಾರರ ಕಚೇರಿ ಬಳಿ ತಂದು ಬಿಡಲಾಗುವುದು ಎಂದು ಹೇಳಿದ್ದಾರೆ.
ಬೆಳಗ್ಗೆ 10.30ಕ್ಕೆ ಸ್ವಾತಂತ್ರ್ಯ ಹೋರಾಟಗಾರರ ಕಚೇರಿ ಉದ್ಘಾಟನೆಯಾಗಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ನಡೆದಾಡಲು ಶಕ್ತರಾಗಿರುವ ಎಲ್ಲ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅವರ ವಿಧವಾ ಪತ್ನಿಯರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯದರ್ಶಿ ಎಚ್.ಎಂ. ಶಿವಣ್ಣ, ಗೌರವ ಕಾರ್ಯದರ್ಶಿ ಜಿ.ಎಂ.ಮುದ್ದೇಗೌಡರು ಮತ್ತು ಪಾಳ್ಯ ಶಂಕರನಾರಾಯಣ್ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

