ಹಾಸನ

ಪರಮೇಶ್ವರ್ ಜನುಮದಿನ; ಹಣ್ಣು ವಿತರಣೆ

Published On :

ಹೊಳೆನರಸೀಪುರ: ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ 63 ನೇ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಮುಖಂಡ  ಎಚ್.ಟಿ. ಲಕ್ಷ್ಮಣ ನೇತೃತ್ವದಲ್ಲಿ ಇತ್ತೀಚೆಗೆ ಪಟ್ಟಣದ ಸಕಾಂರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.   ಈ ಸಂದರ್ಭದಲ್ಲಿ ಎಚ್.ಟಿ. ಲಕ್ಷ್ಮಣ್ ಮಾತನಾಡಿ, ಜಿ ಪರಮೇಶ್ವರ್ ಅವರಿಗೆ ರಾಜಕೀಯವಾಗಿ ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಉನ್ನತ ಸ್ಥಾನ ದೊರೆಯಲೆಂದು ಹಾರೈಸಿದರು. ಶಸ್ತ್ರ ಚಿಕಿತ್ಸಕ ಡಾ.ಟಿ.ಎಸ್. ಲಕ್ಷ್ಮಿಕಾಂತ್, ವೈದ್ಯಾಧಿಕಾರಿ ಡಾ. ಕೆ.ಎಸ್. ರೇಖಾ, ಕಾಂಗ್ರೆಸ್ ಮುಖಂಡರಾದ ಪುರಸಭೆ ಸದಸ್ಯೆ ಜಯಕಾಂತಮ್ಮ ನಾಗರಾಜು, ಗ್ರಾಮ ಪಂಚಾಯ್ತಿ ಸದಸ್ಯೆ ಹೆಚ್.ಆರ್. ಪಾರ್ವತಿ, ಶೋಭಾಲಕ್ಷ್ಮಣ್, ಇತರರು ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.