ಮಾಕನಹಳ್ಳಿಯ ಆಂಜನೇಯ ದೇಗುಲದಲ್ಲಿ ವಿಗ್ರಹ ಪ್ರತಿಷ್ಠಾಪನೆ
ಕ.ಪ್ರ.ವಾರ್ತೆ ಹಾರನಹಳ್ಳಿ ಆ.8
ಹಾರನಹಳ್ಳಿ ಸಮೀಪದ ಎಸ್.ಮಾಕನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನ ಶಿಲಾವಿಗ್ರಹ ಪ್ರತಿಷ್ಠಾಪನೆ ಹಾಗೂ ದೇವಾಲಯ ಗೋಪುರ ಕಳಸ ಸ್ಥಾಪನೆ, ಕುಂಭಾಭಿಷೇಕ ಮಹೋತ್ಸವವು ಬುಧವಾರ ವೈಭವದಿಂದ ನಡೆಯಿತು.
ನೂತನ ಶಿಲಾವಿಗ್ರಹ ಪ್ರತಿಷ್ಠಾಪನೆ ಅಂಗವಾಗಿ ದೇವಾಲಯ ಪ್ರವೇಶ ಮಹೋತ್ಸವ, ರಾಮತಾರಕ ಹೋಮ, ಆಂಜನೇಯ ಮೂಲಮಂತ್ರ ಹೋಮ, ಅಭಿಷೇಕ, ಮಹಾಭಿಷೇಕ, ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ದೇವಾಲಯದ ಪ್ರತಿಷ್ಠಾಪನಾ ಹೋಮ ಕಾರ್ಯವು ವೇ.ಬ್ರ.ಶ್ರೀ. ರಾಕೇಶ್ರವರ ಆಚಾರ್ಯತ್ವದಲ್ಲಿ ನಡೆಯಿತು.
ನಂತರ ನಡೆದ ಧಾರ್ಮಿಕ ಸಮಾರಂಭದಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಬಿಳಿಚೌಡಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯ ಯಾವುದೇ ಕಾರ್ಯ ಮಾಡಬೇಕಾದರೆ ಶ್ರದ್ಧೆ ಮುಖ್ಯ, ಗ್ರಾಮದಲ್ಲಿ ಗ್ರಾಮಸ್ಥರು ಒಟ್ಟಿಗೆ ಸೇರಿ ಆಂಜನೇಯ ಸ್ವಾಮಿ ದೇವಾಲಯ ಜೀರ್ಣೋದ್ಧಾರ ಮಾಡಿರುವುದು ಒಳ್ಳೆಯ ಕಾರ್ಯವಾಗಿದ್ದು ನಮ್ಮ ಯಾವುದೇ ಪ್ರಯತ್ನಕ್ಕೆ ದೇವರ ಶಕ್ತಿ ಅವಶ್ಯಕ. ಹನುಮನ ಶಕ್ತಿ, ಭಕ್ತಿಯನ್ನು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಅರಸೀಕೆರೆ ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ ಮಾತನಾಡಿದರು. ಕನಕಗುರು ಪೀಠದ ಶಿವಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ನಮ್ಮ ದೇಶದಲ್ಲಿ ಶಕ್ತಿ ದೇವತೆಗಳ ಉಪಾಸನೆ ಇದೆ. ಪ್ರತಿ ಹಳ್ಳಿಗಳಲ್ಲೂ ಆಂಜನೇಯ ದೇವಾಲಯಗಳಿವೆ. ಮನುಷ್ಯನಿಗೆ ಭಯ, ಭೀತಿಯಾದಾಗ ದೇವರ ಮೊರೆ ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ವಿದ್ಯಾಭ್ಯಾಸ ಗುರು ಹಿರಿಯರಿಗೆ ಗೌರವ ಕೊಡುವ ಸಂಸ್ಕಾರಗಳನ್ನು ನೀಡುವುದು ತಂದೆ ತಾಯಿಗಳ ಆದ್ಯ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಹುಚ್ಚೇಗೌಡ, ಜಿಪಂ ಮಾಜಿ ಸದಸ್ಯೆ ಪ್ರೇಮಾ, ಎಪಿಎಂಸಿ ಅಧ್ಯಕ್ಷ ಮುರುಂಡಿ ಶಿವಯ್ಯ, ತಾಪಂ ಸದಸ್ಯರಾದ ಹನುಮೇಗೌಡರು, ಹಬ್ಬನಘಟ್ಟ ಗ್ರಾಪಂ ಅಧ್ಯಕ್ಷರಾದ ಲಕ್ಷ್ಮಮ್ಮ, ಹಬ್ಬನಘಟ್ಟ ಗ್ರಾಪಂ ಸದಸ್ಯರಾದ ಪ್ರೇಮಾ ರಘು, ಉಮೇಶ್, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಹೇಮಂತ್ಕುಮಾರ್, ತುಳಸಿ ಇತರರು ಇದ್ದರು. ಗುತ್ತಿನಕೆರೆ ರಂಗನಾಥಸ್ವಾಮಿ, ಗ್ರಾಮದೇವತೆಗಳ ಉತ್ಸವ ಏರ್ಪಡಿಸಲಾಗಿತ್ತು. ಕನಕ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಶಾಖೆಗಳನ್ನು ಪ್ರಾರಂಭಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

